ಎಕೆಎಂಎಸ್ ಸೈಫ್ ಕೊಲೆ ಪ್ರಕರಣ:  ಮತ್ತೋರ್ವ ಆರೋಪಿ ಮಹಿಳೆ ರಿಧಾ ಶಭಾನಾ ಬಂಧನ

Spread the love

ಎಕೆಎಂಎಸ್ ಸೈಫ್ ಕೊಲೆ ಪ್ರಕರಣ:  ಮತ್ತೋರ್ವ ಆರೋಪಿ ಮಹಿಳೆ ರಿಧಾ ಶಭಾನಾ ಬಂಧನ

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರದ ಮನೆಯಲ್ಲಿ ಶನಿವಾರ ನಡೆದ ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಬಡಗಬೆಟ್ಟು ಮಿಷನ್ ಕಂಪೌಂಡ್ ನಿವಾಸಿ ರಿಧಾ ಶಭಾನಾ (27) ಎಂದು ಗುರುತಿಸಲಾಗಿದೆ.

ಈಕೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಈಗಾಗಲೇ ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮೊಹಮದ್ ಶರೀಫ್(37), ಸುರತ್ಕಲ್ ಕೃಷಾಪುರದ ಏಳನೇ ಬ್ಲಾಕ್ ನಿವಾಸಿ ಅಬ್ದುಲ್ ಶುಕೂರು ಯಾನೆ ಅದ್ದು (43) ಬಂಧಿಸಿದ್ದಾರೆ. ಇದರಲ್ಲಿ ಶರೀಫ್ ಹಾಗೂ ಅದ್ದು ಎಕೆಎಂಎಸ್ ಬಸ್‌ನಲ್ಲಿ ಚಾಲಕರಾಗಿ ದುಡಿಯುತ್ತಿದ್ದರೆ, ಫೈಸಲ್ ಖಾನ್, ಸೈಫ್‌ನ ಆತ್ಮೀಯನಾಗಿದ್ದನು.


Spread the love
Subscribe
Notify of

0 Comments
Inline Feedbacks
View all comments