ಎಪ್ರಿಲ್ 15ರೊಳಗೆ ಒಳಾಂಗಣ ಕ್ರೀಡಾಂಗಣ ಸಜ್ಜುಗೊಳಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

Spread the love

ಎಪ್ರಿಲ್ 15ರೊಳಗೆ ಒಳಾಂಗಣ ಕ್ರೀಡಾಂಗಣ ಸಜ್ಜುಗೊಳಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು: ಮಂಗಳೂರು ನಗರದ ಉರ್ವ ಮಾರ್ಕೆಟ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 15ರೊಳಗೆ ಪೂರ್ಣಗೊಳಿಸುವಂತೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಅವರು ಶನಿವಾರ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು.

ಕ್ರೀಡಾಂಗಣವನ್ನು ಶೀಘ್ರವೇ ಕ್ರೀಡಾ ಚಟುವಟಿಕೆಗಳಿಗೆ ಸಮರ್ಪಿಸಲಾಗುವುದು. ಇದರಿಂದ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಉನ್ನತ ಸೌಲಭ್ಯ ದೊರಕಿದಂತಾಗಲಿದೆ. ಯಾವುದೇ ಕಾರಣಕ್ಕೂ ನಿಗದಿತ ಅವಧಿಯನ್ನು ವಿಳಂಬಿಸುವಂತಿಲ್ಲ ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸಚಿವರಿಗೆ ಮಾಹಿತಿ ನೀಡಿ, ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್, ಕಬಡ್ಡಿ ಕ್ರೀಡೆಗಳಿಗೆ ಒಟ್ಟು 11 ಅಂಕಣ ಲಭ್ಯವಾಗಲಿದೆ. ಕ್ರೀಡಾಪಟುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಅಳವಡಿಸಲಾಗಿದೆ. ವಿಶ್ರಾಂತಿ ಕೊಠಡಿ, ಜಿಮ್, ಕೆಫೆಟೇರಿಯ, ವಾಹನ ಪಾಕಿರ್ಂಗ್ ಮತ್ತಿತರ ಸೌಲಭ್ಯ ಲಭ್ಯವಿದೆ. 3 ಲಿಫ್ಟ್‍ಗಳು ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ 33 ಕೋಟಿ ವೆಚ್ಚದಡಿಯಲ್ಲಿ ಒಳಾಂಗಣ ಕ್ರೀಡಾಂಗಣ ಕಾಮಗಾರಿ ನಡೆಸಲಾಗಿದೆ ಎಂದು ಅವರು ಸಚಿವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋμï ಕುಮಾರ್, ಸುಪ್ರೀತ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.


Spread the love