ಎಸ್‍ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮತ್ತು ರಕ್ತದಾನ ಶಿಬಿರ

Spread the love

ಎಸ್‍ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮತ್ತು ರಕ್ತದಾನ ಶಿಬಿರ

ಮಂಗಳೂರು: ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜಿಲ್ಲಾ ಕಛೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಎಸ್‍ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ನೆರವೇರಿಸಿ ಸಂದೇಶ ಭಾಷಣ ಮಾಡಿದರು ಹಾಗೂ ಲಡಾಖ್ ನಲ್ಲಿ ಚೀನಾ – ಭಾರತ ಗಡಿ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ಸಂತಾಪ ಸೂಚಿಸಿ ಮೌನ ಪ್ರಾರ್ಥನೆ ನಡೆಸಲಾಯಿತು.

ನಂತರ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಮಾಡಿದರು. ರಕ್ತದಾನ ಶಿಬಿರವನ್ನು ರಕ್ತದಾನ ಮಾಡುವ ಮೂಲಕ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಯವರು ಅಧಿಕೃತ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ವಿಭಾಗದ ಉಸ್ತುವಾರಿ ಆಶೋಕ್, ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಗೂಡಿನಬಳಿ, ಪ್ರ.ಕಾರ್ಯದರ್ಶಿ ಶಾಹುಲ್ ಎಸ್ ಎಚ್, ಪಾಪ್ಯುಲರ್ ಫ್ರಂಟ್ ಜಿಲ್ಲಾ ಕಾರ್ಯದರ್ಶಿ ಆರ್ಶದ್, ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಆಶ್ರಫ್ ಮಂಚಿ, ಜಿಲ್ಲಾ ಕೋಶಾಧಿಕಾರಿ ನೂರುಲ್ಲಾ ಕುಲಾಯಿ, ಎಸ್‍ಡಿಟಿಯು ಜಿಲ್ಲಾಧ್ಯಕ್ಷ ಖಾದರ್ ಫರಂಗಿಪೇಟೆ, ಎಸ್‍ಡಿಪಿಐ ಮಂ.ದಕ್ಷಿಣ ಕ್ಷೇತ್ರ ಅಧ್ಯಕ್ಷ ಸುಹೈಲ್ ಖಾನ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಸ್ವಾಗತಿಸಿ ವಂದಿಸಿದರು.

ಜಿಲ್ಲಾದ್ಯಂತ ಎಲ್ಲಾ ಅಸೆಂಬ್ಲಿಗಳ ಗ್ರಾಮ ಮಟ್ಟದಲ್ಲಿ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ರಕ್ತದಾನ, ಶ್ರಮದಾನ, ಸ್ವಚ್ಚತೆ, ಸಸಿ ವಿತರಣೆ, ಹಣ್ಣು ಹಂಪಲು ವಿತರಣೆ, ಮಾಸ್ಕ್ ವಿತರಣೆ, ಸ್ಯಾನಿಟೈಸರ್ ವಿತರಣೆ ಮೊದಲಾದ ಸಮಾಜಮುಖಿ ಕಾರ್ಯಕ್ರಮಗಳು ನಡೆಸುವುದರ ಮೂಲಕ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.


Spread the love