ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಸನ್ಮಾನ

Spread the love

ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

1 2

ಎಸ್.ಎಸ್.ಎಲ್.ಸಿ.ಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಂತಹ ಸಾಂದೀಪನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ ಶ್ರೇಯಸ್ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನ ಪಡೆದ ಆರ್.ಎನ್. ಶೆಟ್ಟಿ ಕಾಲೇಜಿನ ನಮ್ರತಾ ಜಿ. ನಾಯಕ್ ಇವರನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಇವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಕ್ಯಾಂಪಸ್ ಪ್ರಂಟ್ ಆಫ್ ಇಂಡಿಯಾ ಹಾರೈಸುತ್ತದೆ.

 


Spread the love