Home Mangalorean News Kannada News ಎ. 25 (ನಾಳೆ) ಉಡುಪಿ ಧರ್ಮಪ್ರಾಂತ್ಯ ವತಿಯಿಂದ ಪೋಪ್ ಫ್ರಾನ್ಸಿಸ್ ಅವರಿಗೆ ಶೃದ್ಧಾಂಜಲಿ ಸಭೆ

ಎ. 25 (ನಾಳೆ) ಉಡುಪಿ ಧರ್ಮಪ್ರಾಂತ್ಯ ವತಿಯಿಂದ ಪೋಪ್ ಫ್ರಾನ್ಸಿಸ್ ಅವರಿಗೆ ಶೃದ್ಧಾಂಜಲಿ ಸಭೆ

Spread the love

ಎ. 25 (ನಾಳೆ) ಉಡುಪಿ ಧರ್ಮಪ್ರಾಂತ್ಯ ವತಿಯಿಂದ ಪೋಪ್ ಫ್ರಾನ್ಸಿಸ್ ಅವರಿಗೆ ಶೃದ್ಧಾಂಜಲಿ ಸಭೆ

ಉಡುಪಿ: ಎಪ್ರಿಲ್ 21 ರಂದು ನಿಧನರಾದ ಕಥೊಲಿಕ ಕ್ರೈಸ್ತ ಸಮುದಾಯದ ಪರಮಪವಿತ್ರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರ ಸ್ಮರಣಾರ್ಥವಾಗಿ ಎಪ್ರಿಲ್ 25 ರಂದು 5 ಗಂಟೆಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಕೈಸ್ತ ಐಕ್ಯತಾ ಒಕ್ಕೂಟ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಸರ್ವ ಧರ್ಮ ಶೃದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಎಪ್ರಿಲ್ 25 ರಂದು ಶುಕ್ರವಾರ ಸಂಜೆ 5 ಗಂಟೆಗೆ ಉಡುಪಿ ಶೋಕಮಾತಾ ದೇವಾಲಯದಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ನೇತೃತ್ವದಲ್ಲಿ ಬಲಿಪೂಜೆ ನಡೆಯಲಿದ್ದು, ಬಳಿಕ 6.00 ಗಂಟೆಗೆ ಚರ್ಚಿನ ಆವೆ ಮರಿಯಾ ಸಭಾಂಗಣದಲ್ಲಿ ಸರ್ವ ಧರ್ಮದ ನಾಯಕರುಗಳ ಉಪಸ್ಥಿತಿಯಲ್ಲಿ ಶೋಕ ಸಭೆ ನಡೆಯಲಿದೆ ಎಂದು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version