ಏಪ್ರಿಲ್ 7ರಂದು ಉಡುಪಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ

Spread the love

ಏಪ್ರಿಲ್ 7ರಂದು ಉಡುಪಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ

ಉಡುಪಿ: ಕಾಂಗ್ರೆಸ್ ಮತ್ತು ಜನತಾದಳ(ಎಸ್) ಪಕ್ಷದ ಪ್ರಮುಖರ ಸಭೆಯು ಏಪ್ರಿಲ್ 7 ರಂದು ಮದ್ಯಾಹ್ನ 12.00 ಗಂಟೆಗೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜರಗಲಿದ್ದು, ಈ ಸಭೆಯಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ರಾಜ್ಯಸಭಾ ಸದಸ್ಯರೂ ಮಾಜಿ ಕೇಂದ್ರ ಸಚಿವರೂ ಆದ ಸನ್ಮಾನ್ಯ ಓಸ್ಕರ್ ಫೆರ್ನಾಂಡಿಸ್, ಮೈತ್ರಿ ಅಭ್ಯರ್ಥಿಯಾದ ಪ್ರಮೋದ್ ಮಧ್ವರಾಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಗೋಪಾಲ ಭಂಡಾರಿ, ಗೋಪಾಲ ಪೂಜಾರಿ ಹಾಗೂ ರಾಕೇಶ್ ಮಲ್ಲಿ ಸಭೆಯಲ್ಲಿ ಭಾಗವಹಿಸಲಿದ್ದು ಎರಡೂ ಪಕ್ಷದ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತು ಜನತಾದಳ(ಎಸ್) ನ ಜಿಲ್ಲಾ ಅಧ್ಯಕ್ಷರಾದ ಯೋಗೀಶ್ ಶೆಟ್ಟಿಯವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love