ಕಂಕನಾಡಿ ನಗರ ಪೊಲೀಸ್ ಠಾಣೆ ವಾಮಂಜೂರು ಪೊಲೀಸ್ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಮರುವಿಂಗಡನೆ

Spread the love

ಕಂಕನಾಡಿ ನಗರ ಪೊಲೀಸ್ ಠಾಣೆ ವಾಮಂಜೂರು ಪೊಲೀಸ್ ಠಾಣೆಗಳ ವ್ಯಾಪ್ತಿಯ ಗ್ರಾಮಗಳ  ಮರುವಿಂಗಡನೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ (ವಾಮಂಜೂರು) ಮತ್ತು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವನ್ನು ಆಗಸ್ಟ್ 15ರಿಂದ ಅನ್ವಯವಾಗುವಂತೆ ಮರು ವಿಂಗಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರು ಮತ್ತು ಅರ್ಕುಳ ಗ್ರಾಮಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮವನ್ನು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿಸಲಾಗಿದೆ.

ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಪದವು ಗ್ರಾಮಕ್ಕೆ ಒಳಪಡುವ ಕುಲಶೇಖರ, ಸಿಲ್ವರ್ ಗೇಟ್, ಡೈರಿ ಗೇಟ್, ಕುಲಶೇಖರ ಚೌಕಿ, ಪದವಿನಂಗಡಿ, ಗುರುನಗರ, ಮೇರಿಹಿಲ್ ವೆಂಕಟರಮಣ ದೇವಸ್ಥಾನ ರಸ್ತೆ, ಕೊಪ್ಪಲಕಾಡು, ಬಾಂದೋಟ್ಟು ಯೆಯ್ಯಾಡಿ, ದಂಡಕೇರಿ, ಶಕ್ತಿನಗರ, ನೀತಿ ನಗರ, ಪೊಲೀಸ್ ಲೇನ್, ಪ್ರೀತಿನಗರ, ಸಂಜಯ ನಗರ, ಮುಗೋಡಿ, ಕಾರ್ಮಿಕ ಕಾಲನಿ, ಕೆಹೆಚ್ಬಿ. ನಾಲ್ಯಪದವು. ಗಂಧಕಾಡು, ಯೆಯ್ಯಾಡಿ ಇಂಡಸ್ಟ್ರಿಯಲ್ ಏರಿಯ, ರಾಜೀವ ನಗರ, ಮುತ್ತಪ್ಪ ಗುಡಿ, ಕಕ್ಕೆಬೆಟ್ಟು, ಮಂಜಡ್ಕ, ದತ್ತ ನಗರ, ಸಿದ್ದ ಪಡ್ಡು ಪ್ರದೇಶಗಳನ್ನು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಅದೇರೀತಿ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರು ಮತ್ತು ಅರ್ಕುಳ ಗ್ರಾಮಕ್ಕೆ ಒಳಪಡುವ ಸ್ಥಳಗಳಾದ ಅಡ್ಯಾರ್ ಪದವು. ವಳಚ್ಚಿಲ್, ಸೋಮನಾಥ ಕಟ್ಟೆ, ಅಡ್ಯಾರ್ ಕಟ್ಟೆ, ಅರ್ಕುಳ, ಶ್ರೀನಿವಾಸ ಕಾಲೇಜು, ಸಹ್ಯಾದ್ರಿ ಕಾಲೇಜ್, ಪ್ರದೇಶಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಮರುವಿಂಗಡಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.

ಹಾಗಾಗಿ ಆ.15ರಿಂದ ಪದವು ಗ್ರಾಮಕ್ಕೆ ಒಳಪಡುವ ಈ ಪ್ರದೇಶದ ಸಾರ್ವಜನಿಕರು ಕ್ರಿಮಿನಲ್ ಪ್ರಕರಣಗಳು, ದೂರು ಅರ್ಜಿಗಳು, ಪಾಸ್ ಪೋರ್ಟ ಅರ್ಜಿ ವಿಚಾರಣೆ, ಪಿಸಿಸಿ ವಿಚಾರಣೆ ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಇತರ ವಿಷಯಗಳ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು. ಹಾಗೂ ಅಡ್ಯಾರು ಮತ್ತು ಅರ್ಕುಳ ಗ್ರಾಮಕ್ಕೆ ಒಳಪಡುವ ಮೇಲ್ಕಂಡ ಪ್ರದೇಶದ ಸಾರ್ವಜನಿಕರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಕಮಿಷನರ್ ಪ್ರಕಟನೆಯಲ್ಲಿ ಸೂಚಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments