ಕಡಬದಲ್ಲಿ ಮತಾಂತರ ಹಾಗೂ ಅನೈತಿಕ ಚಟುವಟಿಕೆ ಶಂಕೆ: ಪೊಲೀಸರ ಪರಿಶೀಲನೆಯಲ್ಲಿ ಯಾವುದೇ ಅಕ್ರಮ ಪತ್ತೆ ಇಲ್ಲ

Spread the love

ಕಡಬದಲ್ಲಿ ಮತಾಂತರ ಹಾಗೂ ಅನೈತಿಕ ಚಟುವಟಿಕೆ ಶಂಕೆ: ಪೊಲೀಸರ ಪರಿಶೀಲನೆಯಲ್ಲಿ ಯಾವುದೇ ಅಕ್ರಮ ಪತ್ತೆ ಇಲ್ಲ

ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮೇ 7, 2026ರಂದು ಮನೆಯೊಂದರಲ್ಲಿ ಮಹಿಳೆಯರು ಹಾಗೂ ಮಕ್ಕಳನ್ನು ಕರೆದುಕೊಂಡು ಬಂದು ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ, ನಾಲ್ಕು ಕುಟುಂಬಗಳಿಗೆ ಸೇರಿದ ಒಟ್ಟು 23 ಮಂದಿ ಗಂಡಸರು, ಮಹಿಳೆಯರು ಹಾಗೂ ಮಕ್ಕಳು ಅಲ್ಲಿ ಇರುವುದಾಗಿ ಕಂಡುಬಂದಿದೆ. ವಿಚಾರಣೆ ವೇಳೆ ಅವರುಗಳು ಬೆಂಗಳೂರಿನ ಪರಿಚಯಸ್ಥರಾಗಿದ್ದು, ಮಂಗಳೂರಿಗೆ ಪ್ರವಾಸದ ನಿಮಿತ್ತ ಬಂದಿರುವುದಾಗಿ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಪರಿಚಯವಿರುವ ಬೆಂಗಳೂರಿನ ಚರ್ಚ್ನ ಫಾದರ್ ಅವರ ತಮ್ಮನ ಮನೆಯಲ್ಲಿ ತಂಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಪೊಲೀಸರ ವಿಚಾರಣೆಯಲ್ಲಿ, ಎಲ್ಲರೂ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದು, ಸುಮಾರು 15ರಿಂದ 20 ವರ್ಷಗಳಿಂದ ಸ್ವಯಂಪ್ರೇರಿತವಾಗಿ ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸಿಕೊಂಡು ಬರುತ್ತಿರುವುದಾಗಿ ತಿಳಿಸಿದ್ದಾರೆ. ಯಾವುದೇ ರೀತಿಯ ಬಲವಂತದ ಮತಾಂತರ ನಡೆದಿಲ್ಲ ಎಂಬುದೂ ವಿಚಾರಣೆಯಲ್ಲಿ ತಿಳಿದುಬಂದಿದೆ.

ಈ ಸಂಬಂಧ ನಡೆದ ಪರಿಶೀಲನೆಯಲ್ಲಿ ಯಾವುದೇ ಅನೈತಿಕ ಚಟುವಟಿಕೆ ಅಥವಾ ಬಲವಂತದ ಮತಾಂತರ ನಡೆದಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments