ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; 15 ಮಂದಿ ವಿರುದ್ಧ ಪ್ರಕರಣ ದಾಖಲು

Spread the love

ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; 15 ಮಂದಿ ವಿರುದ್ಧ ಪ್ರಕರಣ ದಾಖಲು

ಕಡಬ:  ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ 15 ಮಂದಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

YouTube player

ಕಡಬ ಠಾಣೆಯ ಮುಂಭಾಗದಲ್ಲಿ ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್ ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾಧಾಕೃಷ್ಣ, ಕೆ., ಜಯಂತ್ ಮತ್ತು ಇತರ ಮೂವರು ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಅದರಂತೆ ಒಟ್ಟು ಹದಿನೈದು ಮಂದಿಯ ವಿರುದ್ದ ಕಡಬ ಪೊಲೀಸು ಠಾಣೆಯಲ್ಲಿ ಅ.ಕ್ರ: 39/2025 ಕಲಂ: 189(2),190 BNS-2023 ರಂತೆ ಪ್ರಕರಣ ದಾಖಲಾಗಿದೆ.


Spread the love