ಕಡಲ ಮೀನುಗಾರಿಕೆ ಸುಧಾರಣೆ ಯೋಜನೆ – ಚಾಲನೆ

Spread the love

ಕಡಲ ಮೀನುಗಾರಿಕೆ ಸುಧಾರಣೆ ಯೋಜನೆ – ಚಾಲನೆ

ಮಂಗಳೂರು : ಏಷಿಯನ್ ಫಿಶರೀಸ್ ಸೊಸೈಟಿ ಭಾರತೀಯ ಶಾಖೆ, ಮೀನುಗಾರಿಕೆ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದೊಂದಿಗೆ ಜುಲೈ 25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಓಷಿಯನ್ ಪರ್ಲ್ ಹೊಟೇಲಿನ ಪೆಸಿಫಿಕ್-5 ಸಭಾಂಗಣದಲ್ಲಿ ‘ಕಡಲ ಮೀನುಗಾರಿಕೆ ಸುಧಾರಣೆ ಯೋಜನೆ’ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲಾಧಿಕಾರಿ ಎಸ್. ಶಶಿಕಾಂತ ಸೆಂಥಿಲ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡೀನ್, ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರು ಡಾ| ಎ. ಸೆಂಥಿಲ್ ವೇಲ್ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇದರ ನಿರ್ದೇಶಕ ರಾಮಕೃಷ್ಣ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಮೀನುಗಾರಿಕಾ ಮಹಾವಿದ್ಯಾಲಯ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.


Spread the love