Home Mangalorean News Kannada News ಕತ್ತು ಕೊಯ್ದು ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಕತ್ತು ಕೊಯ್ದು ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

Spread the love

ಕತ್ತು ಕೊಯ್ದು ಪತ್ನಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಗರಿಬಿ ಕಾಲೋನಿಯಲ್ಲಿ ನಡೆದಿದೆ.

ಉಮಾ(30) ಕೊಲೆಯಾದ ದುರ್ದೈವಿ. ನಾಗೇಶ್(35) ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಉಮಾ ಹಾಗೂ ನಾಗೇಶ್ ಕಳೆದ ಆರು ವರ್ಷದ ಹಿಂದೆ ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.
ತೀವ್ರವಾಗಿ ಗಾಯಗೊಂಡ ಈಕೆಯ ಪತಿ ಹಾಗೂ ಕೊಲೆ ಆರೋಪಿ ನಾಗೇಶ್ನನ್ನು(42) ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ(ಮಿಮ್ಸ್)ಗೆ ದಾಖಲಿಸಲಾಗಿದೆ.

ಕಳೆದ ಆರು ವರ್ಷದ ಹಿಂದೆ ಉಮಾ ಮತ್ತು ನಾಗೇಶ್ ವಿವಾಹವಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ನಿತ್ಯ ಜಗಳ ಆಗುತ್ತಿತ್ತು. ಇದೇ ವಿಚಾರಕ್ಕೆ ಶುಕ್ರವಾರ ಮುಂಜಾನೆ ಪತ್ನಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಕತ್ತು ಕೊಯ್ದುಕೊಂಡು ನಾಗೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version