ಕನ್ನಡ ಪುಸ್ತಕ ಸೊಗಸು ಬಹುಮಾನ: ಅರ್ಜಿ ಆಹ್ವಾನ
ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು ಅರ್ಜಿ ಸಲ್ಲಿಸಬಹುದು. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ 11 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಕಳುಹಿಸಿಕೊಡಬಹುದು. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆಯನ್ನು ವೆಬ್ಸೈಟ್ ರಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಬೆಂಗಳೂರು ಜೆ.ಸಿ. ರಸ್ತೆಯ ಕನ್ನಡ ಭವನದ ಮೊದಲನೇ ಮಹಡಿಯಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕಚೇರಿ ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













