ಕಬಕದಲ್ಲಿ ಕುಖ್ಯಾತ ಮಾದಕ ವಸ್ತು ವ್ಯಾಪಾರಿ ಬಂಧನ — 10 ಗ್ರಾಂ ನಿಷೇಧಿತ ಮಾದಕ ವಸ್ತು ವಶ
ಪುತ್ತೂರು: ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ರೈಲ್ವೆ ಸೇತುವೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 3ರ ಬೆಳಿಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದೆ.
ಬಂಧಿತನನ್ನು ವಿಚಾರಿಸಿದಾಗ ಆತನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ತಿಳಿದುಬಂದಿದೆ. ಆತನಿಂದ ಹಾಗೂ ಆತನ ಬಳಿಯಿದ್ದ ದ್ವಿಚಕ್ರ ವಾಹನದಿಂದ ನಡೆದ ತಪಾಸಣೆಯಲ್ಲಿ, ಮಾರಾಟಕ್ಕಾಗಿ ಅಕ್ರಮವಾಗಿ ಸಂಗ್ರಹಿಸಿಟ್ಟ 10 ಗ್ರಾಂ MDMA ನಿಷೇಧಿತ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ.
ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ನಂ.: 119/2025, NDPS ಕಾಯ್ದೆ ಕಲಂ 8(C), 22(b) ಅಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿಯ ವಿರುದ್ಧ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 6 ಪ್ರಕರಣಗಳು ದಾಖಲಾಗಿರುವುದು ಬಹಿರಂಗವಾಗಿದೆ. ಆರೋಪಿ ಇನ್ನಷ್ಟು ವಿಚಾರಣೆಗೆ ಪೊಲೀಸ್ ವಶದಲ್ಲಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
