ಕರಾವಳಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ – ಗಣರಾಜ್ಯೋತ್ಸವ ಸಂದೇಶದಲ್ಲಿ ಗೃಹ ಸಚಿವ ಬೊಮ್ಮಾಯಿ

Spread the love

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಚಿಂತನೆ – ಗಣರಾಜ್ಯೋತ್ಸವ ಸಂದೇಶದಲ್ಲಿ ಗೃಹ ಸಚಿವ ಬೊಮ್ಮಾಯಿ

ಉಡುಪಿ: ಕರಾವಳಿಯು ರಾಜ್ಯದ ಅರ್ಥಿಕತೆಗೆ ಹೆಚ್ಚಿನ ಪುಷ್ಠಿ ನೀಡುವ ವಲಯವಾಗಿದ್ದು, ಈ ಪ್ರದೇಶದ ಸಮಗ್ರ ಅಭಿವೃಧ್ದಿಗೆ ಚಿಂತನೆ ನಡೆದಿದೆ ಎಂದು ರಾಜ್ಯದ ಗೃಹ ಮತ್ತು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಭಾನುವಾರ, ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿದರು.

ರಾಜ್ಯದ ಆರ್ಥಿಕತೆಗೆ ಪುಷ್ಠಿ ನೀಡುವ ಕರಾವಳಿಯನ್ನು ಪೂರ್ಣ ಪ್ರಮಾಣದಲ್ಲಿ ಇದುವರೆಗೂ ಬಳಸಿಕೊಳ್ಳಲು ಸಾಧ್ಯವಾಗಿಲ್ಲ,ಕರಾವಳಿಯ ಬಂದರುಗಳನ್ನು ಸಮಗ್ರ ರೀತಿಯಲ್ಲಿ ಅಭಿವೃದ್ದಿ ಪಡಿಸಿ, ಆಮದು ರಫ್ತು ಪ್ರಮಾಣವನ್ನು ಹೆಚ್ಚು ಮಾಡುವ ಮೂಲಕ ಹಾಗೂ ಒಳನಾಡು ಸಾರಿಗೆ ಮತ್ತು ಸಂಪರ್ಕ ರಸ್ತೆಗಳನ್ನು ಅಭಿವೃಧ್ದಿಗೊಳಿಸುವ ಮೂಲಕ, ಪ್ರವಾಸೋದ್ಯವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ದಿüಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸಬೇಕಿದೆ , ಇಲ್ಲಿ ಟೆಂಪಲ್ ಟೂರಿಸಂ ಮತ್ತು ಹೆಲ್ತ್ ಟೂರಿಸಂ ಅಭಿವೃಧಿಪಡಿಸಬೇಕು, ಮೀನುಗಾರಿಕೆಗೆ ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳನ್ನು ನೀಡುವ ಮೂಲಕ , ಕರಾವಳಿ ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ದಿಗೊಳಿಸಲು ಚಿಂತನೆ ನಡೆದಿದೆ ಎಂದು ಸಚಿವ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಸಂಭವಿಸಿದ ಹಾನಿಗಾಗಿ ಪಂಚಾಯತ್ ರಾಜ್ ಇಲಾಖೆಯಿಂದ 29 ಕೋಟಿ ಬಿಡುಗಡೆ ಮಾಡಿದ್ದು, ವಿವಿಧ ಕಾಮಗಾರಿಗಳಿಗಾಗಿ 32 ಕೋಟಿ ಬಿಡುಗಡೆ ಮಾಡಲಾಗಿದೆ.ಜಿಲ್ಲೆಯ 1.90 ಲಕ್ಷ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ 1.39 ಲಕ್ಷ ರೈತರಿಗೆ ಪ್ರೋತ್ಸಾನ ಧನ ನೀಡಲಾಗಿದೆ, ಸಣ್ಣ ನೀರಾವರಿ ಇಲಾಖೆಯಿಂದ 50 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ, ಎಸ್.ಎಫ್.ಸಿ ಅನುದಾನದ ಮೂಲಕ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಭಿವೃಧ್ದಿ ನಡೆಸಲಾಗುತ್ತಿದೆ, ವಾರಾಹಿಯಿಂದ ಉಡುಪಿ ನಗರಕ್ಕೆ 24*7 ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಗಿದೆ, ಲೋಕೋಪಯೋಗಿ ಇಲಾಖೆ ವತಿಯಿಂದ 157 ಕೋಟಿ ರೂ ವೆಚ್ಚದಲ್ಲಿ 194 ಕಿಮೀ ರಸ್ತೆ ಪೂರ್ಣಗೊಂಡಿದೆ ಎಂದು ಬೊಮ್ಮಾಯಿ ತಿಳಿಸಿದರು.

ಸರ್ಕಾರವು ದೇಶದ ಶಾಂತಿ ಸುವ್ಯವಸ್ಥೆಗೆ ಮೊದಲ ಪ್ರಾಶಸ್ತ್ಯ ನೀಡಿದ್ದು, ಸರ್ವರಿಗೂ ಸಮಾನತೆ ನೀಡಿದೆ, ದೇಶದ ಅಭಿವೃಧ್ದಿಯನ್ನು ಕೆಲವು ಶಕ್ತಿಗಳಗೆ ಸಹಿಸಲು ಸಾಧ್ಯವಾಗದೇ , ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಹುನ್ನಾರ ತೋರುತ್ತಿದ್ದು, ಇದನ್ನು ಸಮರ್ಥವಾಗಿ ಎದುರಿಸಲಾಗಿದೆ, ಅಂತಹ ಯಾವುದೇ ಕೃತ್ಯಗಳಿಗೆ ಅವಕಾಶ ನೀಡದೇ ದೇಶವನ್ನು ಭಯೋತ್ಪಾದನಾ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಅತ್ಯುನ್ನತ ಸಾಧನೆ ತೋರಿದ ಸರ್ಕಾರಿ ನೌಕರರಾದ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ. ಎಚ್. ಕೆಂಪೇಗೌಡ, ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕ ಹಾಗೂ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಬಿ.ಕೆ. ಕುಸುಮಾಧರ, ಮೀನುಗಾರಿಕೆ ಉಪನಿರ್ದೇಶಕ ಗಣೇಶ್ ಕೆ., ಜಿ.ಪಂ. ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವ, ಜಿಲ್ಲಾಧಿಕಾರಿಯವರ ಕಚೇರಿ ಅಧೀP್ಷÀಕ ಕೆ. ರಾಮಮೋಹನ್ ಹೆಬ್ಬಾರ್, ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ಕಚೇರಿ ಪ್ರಭಾರ ಕಚೇರಿ ಅಧೀP್ಷÀಕ ವಿಶ್ವನಾಥ, ಕಾಪು ಹೋಬಳಿ ಕಂದಾಯ ನಿರೀP್ಷÀಕ ಕೆ. ರವಿಶಂಕರ್, ಕಾಡೂರು ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ., ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ಸಹಾಯಕ ಬಿ.ವಿ. ಶಿವರಾಮ ರಾವ್, ಪೇತ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮಂಜುನಾಥ ನಾಯ್ಕ ರವರನ್ನು ಸನ್ಮಾನಿಸಲಾಯಿತು.

ಕೃಷಿ ಪ್ರಶಸ್ತಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ಪಡೆದ 13 ಮ0ದಿ ರೈತರನ್ನು ಸನ್ಮಾನಿಸಲಾಯಿತು.
ಗಣರಾಜ್ಯೋತ್ಸವ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಉಡುಪಿ ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ, ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ , ಎಎಸ್‍ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಉಪಸ್ಥಿತರಿದ್ದರು.


Spread the love