Spread the love
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯಕ್ಕೆ ನೀಡಿ: ಹಬೀಬ್ ಅಲಿ
ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡುವಂತೆ ಕೆಪಿಸಿಸಿ ಸಂಯೋಜಕರಾದ ಹಬೀಬ್ ಆಲಿ ಆಗ್ರಹಿಸಿದ್ದಾರೆ
ಕರಾವಳಿ ಭಾಗದ ಉದ್ದಗಲಕ್ಕು ಮುಸ್ಲಿಂ ಸಮುದಾಯದ ಜನಸಂಖ್ಯೆಯು ವ್ಯಾಪಕವಾಗಿದೆ ಅದಲ್ಲದೆ ಹಲವಾರು ವರ್ಷಗಳಿಂದ ಮುಸ್ಲಿಂ ಸಮಾಜವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದೆ ಉಡುಪಿ ಜಿಲ್ಲೆಯಲ್ಲಿ ಇಷ್ಟುವರೆಗೆ ಮುಸ್ಲಿಂ ಸಮುದಾಯಕ್ಕೆ ಯಾವುದೇ ಅವಕಾಶ ಸಿಗಲಿಲ್ಲ. ಆದ್ದರಿಂದ ಈ ಬಾರಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯದ ಮುಖಂಡರಿಗೆ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಗೆ ಮಾಧ್ಯಮ ಪ್ರಕಟಣೆಯ ಮೂಲಕ ಹಬೀಬ್ ಆಲಿ ಆಗ್ರಹಿಸಿದ್ದಾರೆ.
Spread the love