ಕರಾವಳಿ ಜಿಲ್ಲೆ ಧಾರ್ಮಿಕ ಆಚರಣೆಗೆ ಹಿಂದಿನಂತೆ ಅವಕಾಶ ನೀಡುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಯಶ್ಪಾಲ್ ಸುವರ್ಣ ಮನವಿ

Spread the love

ಕರಾವಳಿ ಜಿಲ್ಲೆ ಧಾರ್ಮಿಕ ಆಚರಣೆಗೆ ಹಿಂದಿನಂತೆ ಅವಕಾಶ ನೀಡುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಯಶ್ಪಾಲ್ ಸುವರ್ಣ ಮನವಿ

ಕರಾವಳಿಯ ಜಿಲ್ಲೆಯ ಧಾರ್ಮಿಕ ಆಚರಣೆಗಳನ್ನು ಈ ಹಿಂದಿನಂತೆಯೇ ನಡೆಸಲು ಕಾನೂನು ನಿಯಮಗಳನ್ನು ಸರಳೀಕರಣಗೊಳಿಸಿ ಅವಕಾಶ ನೀಡುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಕರಾವಳಿ ಭಾಗಗಳಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಾದ ಕೋಲ, ನೇಮೋತ್ಸವ, ಜಾತ್ರಾ ಮಹೋತ್ಸವ, ನಾಗಮಂಡಲ, ಯಕ್ಷಗಾನ ಮೊದಲಾದವುಗಳನ್ನು ಅನಾದಿ ಕಾಲದಿಂದ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ.

ಪ್ರತಿ ವರ್ಷ ಸಾರ್ವಜನಿಕ ಶ್ರೀ ಗಣೇಶ ಚತುರ್ಥಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ನವರಾತ್ರಿ ಉತ್ಸವಗಳನ್ನು ಧಾರ್ಮಿಕತೆ ಮತ್ತು ಅದ್ದೂರಿಯಿಂದ ಆಚರಿಸಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಪೊಲೀಸ್ ಇಲಾಖೆ ಈ ಎಲ್ಲಾ ಆಚರಣೆಗಳನ್ನು ನಡೆಸಲು ಕಠಿಣ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸುವ ಮೂಲಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿದೆ.

ಶೋಭಾ ಯಾತ್ರೆ ಆಯೋಜನೆ, ಧ್ವನಿ ವರ್ಧಕ ಬಳಕೆಯ ಬಗ್ಗೆಯೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾಂಪ್ರದಾಯಿಕವಾಗಿ ಹಬ್ಬಗಳನ್ನು ಆಚರಿಸಲು ತೊಂದರೆಯಾಗುತ್ತಿದೆ.

ಕರಾವಳಿ ಜಿಲ್ಲೆಯ ಸಾರ್ವಜನಿಕ ಹಬ್ಬಗಳು ಹಾಗೂ ಧಾರ್ಮಿಕ ಆಚರಣೆಗಳಿಗೆ ನಿಯಮಗಳನ್ನು ಸರಳೀಕರಣಗೊಳಿಸಿ ತ್ವರಿತವಾಗಿ ಅನುಮತಿ ನೀಡಲು ಅವಕಾಶ ಮಾಡುವಂತೆ ಕರಾವಳಿ ಭಾಗದ ಜನತೆಯ ಪರವಾಗಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments