ಕರಾವಳಿ ಬೈಪಾಸ್  ನಿಂದ ಅಂಬಾಗಿಲುವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ ದೀಪಕ್ಕೆ ಆಗ್ರಹಿಸಿ  ದೊಂದಿ (ದೀಪ) ಹಚ್ಚಿ ಪ್ರತಿಭಟನೆ

Spread the love

 ಕರಾವಳಿ ಬೈಪಾಸ್  ನಿಂದ ಅಂಬಾಗಿಲುವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ ದೀಪಕ್ಕೆ ಆಗ್ರಹಿಸಿ  ದೊಂದಿ (ದೀಪ) ಹಚ್ಚಿ ಪ್ರತಿಭಟನೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಕರವಳಿ ಬೈಪಸ್ ನಿಂದ ಅಂಬಾಗಿಲು ಜಂಕ್ಷನ್ ತನಕ ದಾರಿದೀಪ ಕೆಟ್ಟುಹೋಗಿದ್ದು ಪಾದಚಾರಿಗಳು ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಭಯಭೀತರಾಗಿ ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ ಈ ಸಮಸ್ಯೆಯ ಬಗ್ಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಗಮನಸೆಳೆಯಲು ದಿನಂಪ್ರತಿ ದೊಂದಿ ಅಥವಾ ಚಿಮಣಿಯನ್ನು ಉರಿಸಿ ವಿಭಿನ್ನ ರೀತಿಯ ಪ್ರತಿಭಟನೆಗೆ ಇಂದು ಚಾಲನೆ ನೀಡಲಾಯಿತು.

ಸಮಸ್ಯೆ ಬಗೆಹರಿಯುವವರೆಗೆ ಪ್ರತಿದಿನ ಇದೇ ರೀತಿ ಅಥವಾ ಚಿಮಣಿಯನ್ನು ಆ ಉರಿಸಿ ಪಾದಚಾರಿಗಳಿಗೆ ನಮ್ಮಿಂದಾಗುವಷ್ಟು ಬೆಳಕು ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಅಹಮದ್ ರವರು ತಿಳಿಸಿರುತ್ತಾರೆ.

ಸಂದರ್ಭದಲ್ಲಿ ಸುಧೀರ್ ಪೂಜಾರಿ ಉಡುಪಿ ತಾಲೂಕು ಅಧ್ಯಕ್ಷರು, ಶಾಹಿಲ್ ರಹಮತುಲ್ಲಾ ಮಂಜು ನಾಸಿರ್ ಯಾಕೂಬ್, ಸುಹೇಲ್, ಇಂತಿಯಾಜ್, ಹಸನ್ ಸಾಹೇಬ್, ಅನಿಲ್ ಸೇರಿದಂತೆ 25 ಕಾರ್ಯಕರ್ತರು ಉಪಸ್ಥಿತರಿದ್ದರು


Spread the love

1 Comment

  1. When our chosen Leaders are only worried about cow protection, Hindutva, winning election, all basic needs of the public will be conveniently forgotten.

Comments are closed.