ಕಲಬುರಗಿಯಲ್ಲಿ ಕಾರು ಅಪಘಾತ | ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತ್ಯು
ಕಲಬುರಗಿ: ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿಗೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಶ್ವಾನ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಅಪಘಾತದಲ್ಲಿ ಮಹಾಂತೇಶ್ ಬೀಳಗಿ, ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
