ಕಲ್ಲಡ್ಕ ಮೇಲೆ ಕೇಸು ದಾಖಲು: ಹಿಂದೂ ಮುಖಂಡರ ದನಿ ಹತ್ತಿಕ್ಕಲು ಮುಂದಾದ ಸಿದ್ದರಾಮಯ್ಯ ಸರ್ಕಾರ – ಯಶ್ಪಾಲ್ ಸುವರ್ಣ
ಉಡುಪಿ: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕೇಸು ದಾಖಲಿಸುವ ಮೂಲಕ ರಾಷ್ಟ್ರೀಯವಾದಿ ಚಿಂತನೆಯ ಹಿಂದೂ ನಾಯಕರ ದನಿಯನ್ನು ಹತ್ತಿಕ್ಕಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ ಎಸ್ ಎಸ್ ಶತಮಾನೋತ್ಸವದ ಸಂದರ್ಭದಲ್ಲಿ ಹತಾಶಗೊಂಡಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆರ್ ಎಸ್ ಎಸ್ ಸಂಘಟನೆ ಹಾಗೂ ಮುಖಂಡರನ್ನು ಟಾರ್ಗೆಟ್ ಮಾಡಿ ಅಲ್ಪ ಸಂಖ್ಯಾತರನ್ನು ಓಲೈಕೆಗಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಸುಳ್ಳು ಕೇಸು ದಾಖಲಿಸಿದೆ.
ಈ ಹಿಂದೆ 2018ರಲ್ಲಿ ರಾಜಕೀಯ ದ್ವೇಷಕ್ಕಾಗಿ ಕಲ್ಲಡ್ಕ ಪ್ರಭಾಕರ ಭಟ್ ಆಡಳಿತದ ಶಾಲೆಯ ವಿದ್ಯಾರ್ಥಿಗಳ ಬಿಸಿಯೂಟ ಅನುದಾನ ತಡೆ ಮಾಡಿದ್ದ ಅಂದಿನ ಸಿದ್ದರಾಮಯ್ಯ ಸರ್ಕಾರ ಇದೀಗ ಮತ್ತೊಮ್ಮೆ ಸುಳ್ಳು ಕೇಸು ದಾಖಲಿಸುವ ಮೂಲಕ ದೌರ್ಜನ್ಯ ನಡೆಸಲು ಮುಂದಾಗಿದೆ.
ಸಿದ್ದರಾಮಯ್ಯ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯಿಂದ ಹಿಂದೂ ಸಂಘಟನೆಯ ಮುಖಂಡರು ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ನಿರಂತರವಾಗಿ ಮಾಡುತ್ತಿದ್ದು, ಲಕ್ಷಾಂತರ ಹಿಂದೂ ಕಾರ್ಯಕರ್ತರ ಮಾರ್ಗದರ್ಶಕರಾಗಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಹಾಕಿರುವ ಸುಳ್ಳು ಕೇಸುಗಳನ್ನು ತಕ್ಷಣ ಹಿಂಪಡೆಯಬೇಕು, ತಪ್ಪಿದಲ್ಲಿ ಮುಂದಾಗುವ ಅನಾಹುತಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.
