ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ : ನಳಿನ್‍ಕುಮಾರ್ ಆಕ್ರೋಶ

Spread the love

ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ : ಸಂಸದ ನಳಿನ್‍ಕುಮಾರ್ ಆಕ್ರೋಶ

ಮಂಗಳೂರು: ಸಮಾಜಘಾತಕ ಶಕ್ತಿಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಪೆÇಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕಾಂಗ್ರೆಸ್ ಜನಪ್ರತಿನಿಧಿಗಳು ದುಷ್ಕರ್ಮಿಗಳ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿ ಜಿಲ್ಲೆಯಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ. ಅಮಾಯಕ ಹಿಂದೂ ಯುವಕರನ್ನು ವಿನಾ ಕಾರಣ ಬಂಧಿಸಿ ಹಿಂಸೆ ನೀಡುವ ಪ್ರವೃತ್ತಿ ಮತ್ತೆ ಆರಂಭವಾಗಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಲಿದೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಕಲ್ಲಡ್ಕ ಪ್ರಕರಣದಲ್ಲಿ ನಿರಪರಾಧಿಗಳನ್ನು ಬಂಧಿಸಿರುವುದು ಬಹುಸಂಖ್ಯಾತ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಇತ್ತೀಚೆಗೆ ಯಾವುದೇ ಪ್ರಕರಣ ನಡೆದರೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುವಂತೆ ಪೆÇಲೀಸ್ ಇಲಾಖೆಯ ಮೇಲೆ ಒತ್ತಡ ಹೇರಲಾಗುತ್ತಿದೆ. ಅಲ್ಪಸಂಖ್ಯಾತರನ್ನು ಓಲೈಸುವ ಉz್ದÉೀಶದಿಂದ ಕಾಂಗ್ರೆಸ್ ಜನಪ್ರತಿನಿಧಿಗಳು ಇಂತಹ ಕೃತ್ಯ ನಡೆಸುತ್ತಿದ್ದಾರೆ. ಪೆÇಲೀಸರು ಆಡಳಿತ ಪಕ್ಷದ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದಾಗ ಹಿಂದೂ ವಿರೋಧಿ ನೀತಿ ಅನುಸರಿಸಿದ ಕಾಂಗ್ರೆಸ್‍ಗೆ ಮತದಾರರು ಸೂಕ್ತ ಉತ್ತರ ನೀಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ತನ್ನ ಹಳೆ ಚಾಳೆ ಮುಂದುವರಿಸಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love