Home Mangalorean News Kannada News ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ – ಯಶ್ಪಾಲ್ ಸುವರ್ಣ

ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ – ಯಶ್ಪಾಲ್ ಸುವರ್ಣ

Spread the love

ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ ಯಶ್ಪಾಲ್ ಸುವರ್ಣ

ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ ಎನ್ನುವುದು ಸಚಿವ ರಾಜಣ್ಣರ ವಜಾಗೊಳಿಸುವುದರಿಂದ ಸಾಬೀತಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

ರಾಹುಲ್ ಗಾಂಧಿ ಮತಗಳ್ಳತನ ಬಾಲಿಶ ಆರೋಪದ ಬಗ್ಗೆ ಸತ್ಯ ಹೇಳಿದ ಸಹಕಾರ ಸಚಿವ ರಾಜಣ್ಣರನ್ನು ವಜಾಗೊಳಿಸಿ ಹಿರಿಯ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್ ಅಪಮಾನ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಆಪ್ತ ಸಚಿವರನ್ನೇ ಉಳಿಸಿಕೊಳ್ಳಲು ಸಾಧ್ಯವಾಗದ ಹತಾಶ ಪರಿಸ್ಥಿತಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲಿದೆ. ಸ್ವಯಂಘೋಷಿತ ಅಹಿಂದ ಸಿದ್ದರಾಮಯ್ಯರವರಿಗೆ ಗಾಂಧಿ ಕುಟುಂಬ ಎಚ್ಚರಿಕೆಯ ಕರೆಗಂಟೆ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version