ಕಾಂಗ್ರೆಸ್ ಸಮಾವೇಶ: ವಾಹನ ಸಂಚಾರ, ಪಾರ್ಕಿಂಗ್ ವ್ಯವಸ್ಥೆಯಲ್ಲಿ ಮಾರ್ಪಾಡು

Spread the love

ಕಾಂಗ್ರೆಸ್ ಸಮಾವೇಶ: ವಾಹನ ಸಂಚಾರ, ಪಾರ್ಕಿಂಗ್ ವ್ಯವಸ್ಥೆಯಲ್ಲಿ ಮಾರ್ಪಾಡು

ಮಂಗಳೂರು: ನಗರದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ದಿನಾಂಕ: 17-02-2024 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ರಾಜ್ಯ ನಾಯಕರು ಹಾಗೂ ಕಾರ್ಯಕರ್ತರು ಆಗಮಿಸಲಿರುತ್ತಾರೆ.

ಸದರಿ ಕಾರ್ಯಕ್ರಮವು ಪಡೀಲ್ ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 73 ರ ರಸ್ತೆಯ ಸಮೀಪದಲ್ಲಿ ನಡೆಯುತ್ತಿದ್ದು, ಸದ್ರಿ ಸಮಾವೇಶಕ್ಕೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಸದರಿ ರಸ್ತೆಯು ಸಂಚಾರ ದಟ್ಟಣೆಯಿಂದ ಕೂಡುವ ಸಾಧ್ಯತೆ ಇರುತ್ತದೆ. ಆದ ಕಾರಣ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 73 ರ ರಸ್ತೆಯಲ್ಲಿ ಸಂಚರಿಸುವ ಘನ ವಾಹನಗಳ ಸಂಚಾರದಲ್ಲಿ ಈ ಕೆಳಗಿನಂತೆ ಬದಲಾವಣೆ ಮಾಡಲಾಗಿದೆ ಹಾಗೂ ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಈ ಕೆಳಕಂಡ ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.

ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ:-

  1. ಉಡುಪಿ ಕಡೆಯಿಂದ ಮಂಗಳೂರು ನಗರದ ಮೂಲಕ ಬಿ.ಸಿ.ರೋಡ್ / ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್ ವೆಲ್-ತೊಕ್ಕೊಟ್ಟು-ಮುಡಿಪು-ಮೆಲ್ಕಾರ್ ಮೂಲಕ ಸಂಚರಿಸುವುದು.
  2. ಬೆಂಗಳೂರು / ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಲಾರ್- ಮುಡಿಪು-ತೊಕ್ಕೊಟ್ಟು-ಪಂಪ್ ವೆಲ್ ಮೂಲಕ ಸಂಚರಿಸುವುದು.

ಈ ತಾತ್ಕಾಲಿಕ ಸಂಚಾರ ಮಾರ್ಪಾಡು ದಿನಾಂಕ: 17-02-2024 ರಂದು ಬೆಳಗ್ಗೆ 09.00 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಊರ್ಜಿತದಲ್ಲಿರುತ್ತದೆ.

ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನ ಪಾರ್ಕಿಂಗ್ ಸ್ಥಳಗಳ ವಿವರ:-

  1. ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳು ಹಾಗೂ ಸಾರ್ವಜನಿಕರ ಮೋಟಾರು ಸೈಕಲ್ಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
  2. ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್ನ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
  3. ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಕಾರ್ಯಕರ್ತರನ್ನು ಕಾಮತ್ ಪಾರ್ಕಿಂಗ್ ಬಳಿ ಇಳಿಸಿ ಅಲ್ಲಿಂದ ಮುಂದುವರಿದು ಬಸ್ಸನ್ನು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿಶ್ಯಾಮ್/ಷಾ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
  4. ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್ ಗಾರ್ಡನ್ ನಲ್ಲಿ ಪಾರ್ಕಿಂಗ್ ಮಾಡುವುದು.
  5. ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳ ಚಾಲಕರು ಕಾರ್ಯಕರ್ತರನ್ನು ಅಡ್ಯಾರ್ ಗಾರ್ಡನ್ ಮುಂಭಾಗ ಇಳಿಸಿ ಸೋಮನಾಥಕಟ್ಟೆಯಲ್ಲಿ ಯೂ ಟರ್ನ್ ಮಾಡಿ ಕಣ್ಣೂರು ಮಸೀದಿ ಬಳಿ ಇರುವ ಷಾ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
  6. ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಮೋಟಾರ್ ಸೈಕಲ್ಗಳನ್ನು ಅಡ್ಯಾರ್ ಗಾರ್ಡನ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
  7. ಅಡ್ಯಾರ್ ಕಟ್ಟೆಯಲ್ಲಿರುವ ಜಯಶೀಲ ರವರ ಮೈದಾನದಲ್ಲಿ ಕೂಡಾ ಪಾರ್ಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ.

Spread the love