ಕಾಡಾನೆ ದಾಳಿಗೆ ವ್ಯಕ್ತಿ ಸಾವು ಸಚಿವ ಈಶ್ವರ ಖಂಡ್ರೆ ಸಂತಾಪ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೌತಡ್ಕ ಬಳಿ ಆನೆ ದಾಳಿಯಿಂದ 60 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಮೃತ ಬಾಲಕೃಷ್ಣ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಖಂಡ್ರೆ ಪ್ರಾರ್ಥಿಸಿದ್ದಾರೆ.
ಮೃತರ ಹತ್ತಿರದ ಬಂಧುಗಳಿಗೆ ಕೂಡಲೇ ಪರಿಹಾರದ ಮೊತ್ತ 20 ಲಕ್ಷ ಪಾವತಿಸುವಂತೆ ಮತ್ತು ಆನೆಗಳನ್ನು ಕಾಡಿಗೆ ಮರಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.