ಕಾದಂಬರಿ ‘ವಾಸ್ತು’ ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆ

Spread the love

ಕಾದಂಬರಿ ‘ವಾಸ್ತು’ ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಭಾರ ಕುಲಪತಿ ಡಾ. ಕಿಶೋರಿ ನಾಯಕ ಅವರಿಂದ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪ್ರಶಸ್ತಿ ಪುರಸ್ಕøತ “ವಾಸ್ತು” ಕನ್ನಡ ಅನುವಾದ ಪುಸ್ತಕ ಲೋಕಾರ್ಪಣೆಗೊಂಡಿತು.

ವಿಶ್ವ ಕೊಂಕಣಿ ಕೇಂದ್ರ ಸ್ಥಾಪಕ ಅಧ್ಯಕ್ಷ ಬಸ್ತಿ ವಾಮನ ಶೆಣೈ, ಹಂಪಿ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಪ್ರೊ. ಎ. ವಿ. ನಾವಡ ‘ವಾಸ್ತು’ ಕನ್ನಡ ಅನುವಾದಕಿ ಡಾ. ಗೀತಾ ಶೆಣೈ, ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ. ಉದಯ್‍ಕುಮಾರ ಎಂ. ಎ., ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಫಾ. ಮೈಕಲ್ ಸಾಂತುಮಯರ್, ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷಾ ಸಮಿತಿಯ ಸಂಯೋಜಕ ಡಾ. ಭೂಷಣ ಭಾವೆ, ಸದಸ್ಯ ಪಯ್ಯನೂರು ರಮೇಶ ಪೈ, ವಿಶ್ವ ವಿದ್ಯಾನಿಲಯದ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ರಾಮಕೃಷ್ಣ ಬಿ, ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್, ಮಂಗಳೂರು ವಿಶ್ವ ವಿದ್ಯಾಲಯದ ಕೊಂಕಣಿ ಅಧ್ಯಯನ ಪೀಠದ ಸಂಯೋಜಕ ಡಾ. ಜಯವಂತ ನಾಯಕ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಕೊಂಕಣಿ ಸ್ನಾತಕೋತ್ತರ ಪದವಿ ಸಂಯೋಜಕ ಡಾ. ದೇವದಾಸ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Spread the love