ಕಾನೂನು ಕೈಗೆತ್ತಿಕೊಳ್ಳುವುದು ಯಾವುದೇ ಸಮಸ್ಯೆಗೆ ಪರಿಹಾರವಲ್ಲ – ಎಸ್.ಐ.ಓ ಕರ್ನಾಟಕ

Spread the love

ಕಾನೂನು ಕೈಗೆತ್ತಿಕೊಳ್ಳುವುದು ಯಾವುದೇ ಸಮಸ್ಯೆಗೆ ಪರಿಹಾರವಲ್ಲ – ಎಸ್.ಐ.ಓ ಕರ್ನಾಟಕ

ಬೆಂಗಳೂರು: ಕೋಟ್ಯಾಂತರ ಮುಸ್ಲಿಮರು ಗೌರವಯುತವಾಗಿ ಕಾಣುವ ಪ್ರವಾದಿ ಮುಹಮ್ಮದ್ (ಸ) ನಿಂದನೆ ಖಂಡನೀಯ. ಅವರ ಬಗ್ಗೆ ಅವಹೇಳನಕಾರಿಯಾಗಿ ಫೇಸ್ಬುಕ್ ಪೋಸ್ಟ್ ಮಾಡಿರುವುದು ಅಕ್ಷಮ್ಯ. ಆದರೆ ಇಂತಹ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿಯೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು.

ಕಾವಲ ಭೈರಸಂಧ್ರದಲ್ಲಿ ರಾತ್ರಿ ನಡೆದ ಘಟನೆ ದುರದೃಷ್ಟಕರ. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ನೆಲದ ಕಾನೂನಿಗೆ ಗೌರವ ನೀಡಬೇಕಾಗಿರುವುದು ನಮ್ಮ ಮೊದಲ ಆದ್ಯತೆಯಾಗಿರಬೇಕು. ನಿನ್ನೆಯ ಗಲಭೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ನಿರಾಪರಾಧಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಪಾರದರ್ಶಕವಾಗಿ ಘಟನೆಯ ಬಗ್ಗೆ ತನಿಖೆ ನಡೆಸಬೇಕೆಂದು ಎಸ್.ಐ.ಓ ಕರ್ನಾಟಕ ಆಗ್ರಹಿಸುತ್ತದೆ.

ಎಲ್ಲ ಜನರು ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸರಕಾರದೊಂದಿಗೆ ಕೈ ಜೋಡಿಸಬೇಕು. ಮಾಧ್ಯಮಗಳು ಕೂಡ ವಸ್ತುನಿಷ್ಠ ವರದಿಯನ್ನು ಬಿತ್ತರಿಸಬೇಕು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಎಸ್.ಐ.ಓ ಕರ್ನಾಟಕ ವಿನಂತಿಸುತ್ತದೆ.


Spread the love