ಕಾಪುವಿಗೆ ಆಗಮಿಸಿದ ರಾಹುಲ್ ಗಾಂಧಿ; ರಾಜೀವ್ ಗಾಂಧಿ ಪೊಲಿಟಿಕಲ್ ಅಕಾಡೆಮಿ ಉದ್ಘಾಟನೆ

Spread the love

ಕಾಪುವಿಗೆ ಆಗಮಿಸಿದ ರಾಹುಲ್ ಗಾಂಧಿ; ರಾಜೀವ್ ಗಾಂಧಿ ಪೊಲಿಟಿಕಲ್ ಅಕಾಡೆಮಿ ಉದ್ಘಾಟನೆ

ಉಡುಪಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ರಾಹುಲ್ ಗಾಂಧಿಯವರು ಪ್ರಥಮ ಬಾರಿಗೆ ಚುನಾವಣಾ ಪ್ರಚಾರ ತಯಾರಿಯ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರಕ್ಕೆ ಮಂಗಳವಾರ ಆಗಮಿಸಿದರು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ ಮೂಲಕ ತೆಂಕ ಎರ್ಮಾಳ್ ಹೆಲಿಪ್ಯಾಡಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಪಕ್ಷದ ಅಧ್ಯಕ್ಷ ಡಾ. ಜಿ ಪರಮೇಶ್ವರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಸ್ವಾಗತಿಸಿದರು.

ಬಳಿಕ ವಿಶೇಷ ಭದ್ರತೆಯ ವಾಹನದ ಮೂಲಕ ತೆಂಕ ಎರ್ಮಾಳಿನಲ್ಲಿ ನಿರ್ಮಿಸಿರುವ ರಾಜೀವ್ ಗಾಂಧಿ ಪೊಲಿಟಿಕಲ್ ಅಕಾಡೆಮಿಯ ಉದ್ಘಾಟನೆ ನೆರೆವೇರಿಸಿ ಸೇವಾದಳದ ಮುಖಂಡರುಗಳೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ. ವೇಣುಗೋಪಾಲ್, ಪಿ ಸಿ ವಿಷ್ಣುನಾಥ್, ದಿನೇಶ್ ಗುಂಡೂರಾವ್, ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.


Spread the love