Home Mangalorean News Kannada News ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಕೊರೋನಾ ಪಾಸಿಟಿವ್ ದೃಢ

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ನನ್ನ ಆಪ್ತ ಕಾರ್ಯದರ್ಶಿಯೋರ್ವರಿಗೆ ಕೋವಿಡ್ 19 ಪಾಸಿಟಿವ್ ಬಂದ ಹಿನ್ನಲೆ ಕಳೆದ 7 ದಿನಗಳಿಂದ ಹೋಂ ಕಾರಂಟೈನ್ ನಲ್ಲಿದ್ದು ಮುಂಜಾಗೃತಾ ಕ್ರಮವಾಗಿ ನಾನು ಪರೀಕ್ಷೆ ಮಾಡಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದ್ದು ಯಾವುದೇ ಸೋಂಕಿನ ಲಕ್ಷಣಗಳು ಇಲ್ಲದಿರುವುದರಿಂದ ಕೋವಿಡ್ ಕೇರ್ ಸೆಂಟರ್ ನಲ್ಲಿ ಶೂಶ್ರುಷೆ ಪಡೆಯುತ್ತಿದ್ದೇನೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸಿ..ನಾನು ಆದಷ್ಟು ಬೇಗ ಕಾಪು ಜನತೆಯ ಸೇವೆಗೆ ಮರಳುತ್ತೇನೆ ತಮ್ಮ ಸಹಕಾರವಿರಲಿ ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


Spread the love

Exit mobile version