ಕಾಪು: ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಲ್ಲಿ ಕೋವಿಡ್ ಧೃಡ: ಸಾವು,

Spread the love

ಕಾಪು: ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಲ್ಲಿ ಕೋವಿಡ್ ಧೃಡ: ಸಾವು,

ಉಡುಪಿ: ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿ ಮೃತಪಟ್ಟಿದ್ದು ಅವರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿರುತ್ತದೆ

ಪೀಟರ್ ಮಥಾಯಸ್ ರವರು ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಮೇ 29 ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಕೋವಿಡ್ ಟೆಸ್ಟ್ ಮಾಡಿದಾಗ ಅವರಲ್ಲಿ ಕೋರೋನ ದೃಢಪಟ್ಟಿರುತ್ತದೆ. ಅವರು ಚಿಕಿತ್ಸೆಗೆ ಸ್ಪಂದಿಸದೆ ಜೂನ್ 2ರಂದು ಅಪರಾಹ್ನ ಮೃತಪಟ್ಟಿರುತ್ತಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ’ ವಿದ್ಯಾಕುಮಾರಿ ಅವರು ಪೀಟರ್ ಮಥಾಯಸ್ ಅವರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಪರೀಕ್ಷೆ ಮಾಡಿದಾಗ ಕೋವಿಡ್ ಇರುವುದು ಧೃಡಪಟ್ಟಿದೆ ಆದರೆ ಅವರು ಬೇರೆ ಉದ್ದೇಶಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದು ಈ ಸಾವನ್ನು ಕೋವಿಡ್ ಸಾವು ಎಂದು ಪರಿಗಣಿಸಲಾಗುವುದಿಲ್ಲ. ಅಲ್ಲದೆ ಅವರ ಮನೆಯವರಾರಿಗೂ ಕೋವಿಡ್ ಲಕ್ಷಣಗಳು ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಮೃತರ ಮನೆಗೆ ಕಾಪು ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿರುತ್ತಾರೆ. ಮೃತದೇಹ ಆಸ್ಪತ್ರೆಯಲ್ಲಿ ಇರಿಸಿದ್ದು ಜೂ 4 ರಂದು ಬುಧವಾರ ಅಂತ್ಯ ಸಂಸ್ಕಾರ ಏರ್ಪಡಿಸಲಾಗಿದ್ದು ಕೋವಿಡ್ SOP ಅನುಸರಿಸಿ ಅಂತ್ಯ ಸಂಸ್ಕಾರ ಕೈಗೊಳ್ಳಲು ತಹಶಿಲ್ದಾರ್ ತಿಳಿಸಿದ್ದಾರೆ.

ತಹಶಿಲ್ದಾರ್ ಮತ್ತು ವೈದ್ಯರ ತಂಡ, ಆಶಾ ಕಾರ್ಯಕರ್ತೆ ಎಲ್ಲರೂ ಇಂದು ಆ ಮನೆಗೆ ಭೇಟಿ ನೀಡಿ ಊರಿನ ಜನರಿಗೆ ಕೊರೊನ ಮುನ್ನೆಚ್ಚರಿಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ. ಕೊರೊನ SOP ಪಾಲಿಸುವಂತೆ ಸೂಚನೆ ನೀಡಿರುತ್ತಾರೆ.

ತಾಲ್ಲೂಕು ವೈದ್ಯಾಧಿಕಾರಿ ವಾಸುದೇವ್, ಶಿರ್ವ ಮೆಡಿಕಲ್ ಆಫೀಸರ್ ಸುಬ್ರಹ್ಮಣ್ಯ, ವೈದ್ಯೆ ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.


Spread the love
Subscribe
Notify of

0 Comments
Inline Feedbacks
View all comments