ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವಿಸರ್ಜನೆ

Spread the love

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವಿಸರ್ಜನೆ

ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಗೆ ಸಂಬಂದಿಸಿದ ಹೋರಾಟದಲ್ಲಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಮಾನ್ಯ ಉದಯ ಕುಮಾರ್ ಶೆಟ್ಟಿಯವರು ಪರಶುರಾಮ ಮೂರ್ತಿಯ ಪುನರ್ ನಿರ್ಮಾಣ ಮಾಡಲು ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಬೆಂಬಲ ಸೂಚಿಸಿ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಅಧ್ಯಕ್ಷ ಕೃಷ್ಣ ಶೆಟ್ಟಿ ಹೇಳಿದ್ದಾರೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು ಕಾರ್ಕಳ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ದೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿರುತ್ತದೆ. ಇದೀಗ ಕಾರ್ಕಳದ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಾನ್ಯ ಉದಯ ಕುಮಾರ್ ಶೆಟ್ಟಿಯವರು ನಮ್ಮ ಸಮಿತಿಯು ಹೊಂದಿದ್ದ ಸದುದ್ದೇಶವನ್ನೇ ಇಟ್ಟುಕೊಂಡು ಉಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದರಿಂದ ಈ ಸಂಧರ್ಭ ನಮ್ಮ ಸಮಿತಿಯು ಯಾವುದೇ ನಿರ್ಣಯವನ್ನು ಕೈಗೊಂಡರೇ ಕಾನೂನಿನ ತೊಡಕಾಗುವ ಸಾಧ್ಯತೆ ಇದ್ದು ಇದು ಉದಯ ಕುಮಾರ್ ಶೆಟ್ಟಿಯವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ತೊಂದರೆಯಾಗುವ ಸಂಭವ ಇರುವುದರಿಂದ ಮಾನ್ಯ ಉದಯ್ ಕುಮಾರ್ ಶೆಟ್ಟಿಯವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಪೂರ್ಣವಾಗಿ ಬೆಂಬಲವನ್ನು ನೀಡುವ ಉದ್ದೇಶದಿಂದ ಈ ಸಮಿತಿಯನ್ನು ಬರ್ಖಾಸ್ತುಗೊಳಿಸುವ ನಿರ್ಣಯವನ್ನು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಸಭೆ ಸೇರಿ ತೆಗೆದುಕೊಂಡಿರುತ್ತದೆ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಎಲ್ಲ ಪಧಾಧಿಕಾರಿಗಳು ಮತ್ತು ಸದಸ್ಯರು ಉದಯ ಕುಮಾರ್ ಶೆಟ್ಟಿಯವರ ನಿಲುವಿಗೆ ಮತ್ತು ಕಾನೂನಾತ್ಮಕ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ನಿರ್ಣಯಿಸಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತುಗೊಳಿಸಿರುವುದಾಗಿ ಇನ್ನು ಮುಂದೆ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಅಸ್ತಿತ್ವದ್ಲಲಿ ಇರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೃಷ್ಣ ಶೆಟ್ಟಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments