Spread the love
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಪಿತೃವಿಯೋಗ
ಕಾರ್ಕಳ: ಶಾಸಕ ವಿ. ಸುನೀಲ್ ಕುಮಾರ್ ಅವರ ತಂದೆ ಕೆ ಎಂ ವಾಸುದೇವ ಅವರು ಗುರುವಾರ ಮುಂಜಾನೆ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.
ಮೃತರು ಪತ್ನಿ, ಪುತ್ರ ಶಾಸಕ ಸುನೀಲ್ ಕುಮಾರ್ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.
Spread the love