ಕಾರ್ಕಳ – ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Spread the love

ಕಾರ್ಕಳ – ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ಉಡುಪಿ: ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

YouTube player

ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ನಲ್ಲೂರು ಗ್ರಾಮದ ಕೊಡಪಟ್ಯಾ ಮನೆಯವರು. ಇವರು ವೇಣೂರಿನಿಂದ ನಲ್ಲೂರಿಗೆ ಬರುತ್ತಿದ್ದರು. ಈ ವೇಳೆ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love