Home Mangalorean News Kannada News ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್, ಎಸಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಅಮಾನತು

ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್, ಎಸಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಅಮಾನತು

Spread the love

ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್, ಎಸಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಅಮಾನತು

ಬೆಂಗಳೂರು: ಬೆಂಗಳೂರಿನ ಎಂ,ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ , ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್ ಅವರನ್ನು ಅಮಾನತು ಮಾಡಲಾಗಿದೆ. ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದರು.

ಘಟನೆಯ ಕುರಿತು ತನಿಖೆ ನಡೆಸಲು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದ್ದು, ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದರು

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು


Spread the love

Exit mobile version