Home Mangalorean News Kannada News ಕಾವ್ಯ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿ ಎನ್,ಎಸ್.ಯು.ಐ. ಪ್ರತಿಭಟನೆ

ಕಾವ್ಯ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿ ಎನ್,ಎಸ್.ಯು.ಐ. ಪ್ರತಿಭಟನೆ

Spread the love

ಕಾವ್ಯ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿ ಎನ್,ಎಸ್.ಯು.ಐ. ಪ್ರತಿಭಟನೆ

ಕುಂದಾಪುರ: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟು, 10 ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಪೂಜಾರಿಯ ನಿಘೂಡ ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆಗೆ ಆಗ್ರಹಿಸಿ ಎನ್,ಎಸ್.ಯು.ಐ. ವತಿಯಿಂದ ಶಂಕರನಾರಾಯಣ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಕಾಲೇಜಿನಿಂದ ಗ್ರಾಮ ಪಂಚಾಯತ್ ವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ತಹಶೀಲ್ದಾರರಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕ್ರಿಸ್ಟನ್ ಅಲ್ಮೇಡಾ, ಇತರ ಪದಾಧಿಕಾರಿಗಳಾದ ಪ್ರದೀಪ್ ಕುಮಾರ್ ಶೆಟ್ಟಿ, ಜಿತೀನ್ ಶೆಟ್ಟಿ, ಸಂದೇಶ್ ಶೆಟ್ಟಿ, ವಿನಾಯಕ ಆಚಾರ್ಯ, ಕಾರ್ತಿಕ್ ಆಚಾರ್ಯ, ಶೋಧನ್ ಶೆಟ್ಟಿ, ಪೂರ್ಣಿಮಾ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಪ್ರಥ್ವಿರಾಜ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version