Home Mangalorean News Kannada News ಕಾಸರಗೋಡು | ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಗಂಭೀರವಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ...

ಕಾಸರಗೋಡು | ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಗಂಭೀರವಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು

Spread the love

ಕಾಸರಗೋಡು | ಅಂಗಡಿಗೆ ನುಗ್ಗಿ ಬೆಂಕಿ ಹಚ್ಚಿದ ಪ್ರಕರಣ : ಗಂಭೀರವಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾಸರಗೋಡು : ಪೊಲೀಸರಿಗೆ ದೂರು ನೀಡಿದ ವೈಷಮ್ಯದಿಂದ ದುಷ್ಕರ್ಮಿಯೋರ್ವ ಅಂಗಡಿಗೆ ನುಗ್ಗಿ ಯುವತಿಗೆ ಬೆಂಕಿ ಹಚ್ಚಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಬೇಡಡ್ಕ ನಿವಾಸಿ ರಮಿತಾ ( 22) ಮೃತ ಯುವತಿ. ತಮಿಳುನಾಡು ಮೂಲದ ರಾಮಕೃತ (57) ಬೆಂಕಿ ಹಚ್ಚಿದ ಆರೋಪಿ.

ಮೃತ ರಮಿತಾ ಬೇಡಡ್ಕದ ಮನ್ನಡ್ಕ ಎಂಬಲ್ಲಿ ಅಂಗಡಿ ನಡೆಸುತ್ತಿದ್ದಳು. ಆರೋಪಿ ರಾಮಕೃತ ಪಾನಮತ್ತನಾಗಿ ಬಂದು ಆಕೆಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದನು. ಈ ಬಗ್ಗೆ ರಮಿತಾ ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದಳು. ಇದೇ ಕಾರಣಕ್ಕೆ ವೈಷಮ್ಯದಿಂದ ಎ.8 ರಂದು ಸಂಜೆ 3 ಗಂಟೆಗೆ ಅಂಗಡಿಯೊಳಗೆ ನುಗ್ಗಿದ ಆರೋಪಿ ಯುವತಿಗೆ ಟಿನ್ನರ್ ಸುರಿದು ಬೆಂಕಿ ಹಚ್ಚಿದ್ದನು. ಕೃತ್ಯ ನಡೆಸಿ ಪರಾರಿಯಾಗಲೆತ್ನಿಸಿದ್ದ ಆರೋಪಿಯನ್ನು ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದರು.

ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


Spread the love

Exit mobile version