ಕುಂದಾಪುರ ಎಸಿ ಮತ್ತು ಐಎಎಸ್ ಪ್ರೊಬೇಶನರಿ ಅಧಿಕಾರಿಗೆ ಚುನಾವಣಾ ಕರ್ತವ್ಯಕ್ಕೆ ಅಡ್ಡಿ ದೂರು ; ಇಬ್ಬರು ವಶ

Spread the love

ಕುಂದಾಪುರ ಎಸಿ ಮತ್ತು ಐಎಎಸ್ ಪ್ರೊಬೇಶನರಿ ಅಧಿಕಾರಿಗೆ ಚುನಾವಣಾ ಕರ್ತವ್ಯಕ್ಕೆ ಅಡ್ಡಿ ದೂರು ; ಇಬ್ಬರು ವಶ

ಕುಂದಾಪುರ: ಚುನಾವಣಾ ಕರ್ತವ್ಯದ ಮೇಲೆ ಹೋಟೆಲೊಂದರ ಮೇಲೆ ದಾಳಿ ಮಾಡಲು ತೆರಳಿದ್ದ ಕುಂದಾಪುರ ಸಹಾಯಕ ಕಮೀಷನರ್ ಮತ್ತು ಪ್ರೊಬೆಶನರಿ ಐಎಎಸ್ ಅಧಿಕಾರಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಕುಂದಾಪುರ ಸಮೀಪದ ಕೋಟೇಶ್ವರದ ಹೋಟೇಲ್ ಮತ್ತು ಲಾಡ್ಜ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮ್ಯಾಂಗಲೋರಿಯನ್ ಪ್ರತಿನಿಧಿಗೆ ಮಾಹಿತಿ ನೀಡಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರಗಿ ಅವರು ಕುಂದಾಪುರ ಸಹಾಯಕ ಕಮೀಷನರ್ ಭೂಬಾಲನ್ ಮತ್ತು ಐಎಎಸ್ ಪ್ರೊಬೇಶನರಿ ಅಧಿಕಾರಿ ಪೂವಿತಾ ಹಾಗೂ ಅಬಕಾರಿ ಡಿಸಿ ನೀರು ನಂದನ್ ಅವರು ಸಾರ್ವಜನಿಕರ ದೂರಿನನ್ವಯ ಚುನಾವಣಾ ನೀತಿ ಸಂಹಿತೆ ಪಾಲನೆ ನಿಟ್ಟಿನಲ್ಲಿ ಸೋಮವಾರ ರಾತ್ರಿ ಕುಂದಾಪುರ ಬಳಿ ರಾಷ್ಟ್ರೀಯ ಹೆದ್ದಾರಿ ಕೋಟೇಶ್ವರದ  ಹೋಟೆಲಿಗೆ ದಾಳಿ ನಡೆಸಿದ್ದರು.

ಹೋಟೆಲಿನಲ್ಲಿಮದ್ಯ ಸರಬರಾಜು ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದು ಈ ಕುರಿತು ಅವರೊಂದಿಗೆ ತಪಾಸಣೆಗೆ ತೆರಳಿ ಹೋಟೆಲಿನಲ್ಲಿ ವಿಡಿಯೋ ಚಿತ್ರಿಕರಣ ಮಾಡುತ್ತಿರುವ ವೇಳೆ ಗ್ರಾಹಕರು ಮತ್ತು ಹೋಟೆಲಿನವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂದರ್ಭ ಅಧಿಕಾರಿಗಳು ಮತ್ತು ಗ್ರಾಹಕರ ನಡುವೆ ಮಾತಿನ ಚಕಮಕಿ ನಡೆದಿದ್ದು ಗ್ರಾಹಕರ ಪೈಕಿ ಒಬ್ಬರು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಸುವ ಯತ್ನ ಮಾಡಿದ್ದಾರೆ

ಅಪಾಯದ ಮುನ್ಸೂಚನೆಯನ್ನು ಅರಿತ ಅಧಿಕಾರಿಗಳು ಕೂಡಲೇ ಕುಂದಾಪುರ ಠಾಣೆಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಪೋಲಿಸರು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಸಲುವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಹಾಯಕ ಕಮೀಷನರ್ ಅವರಿಗೆ ಗನ್ ಮ್ಯಾನ್ ನೀಡಿದ್ದು ಇದರಿಂದ ನಡೆಯಬಹುದಾದ ಹಲ್ಲೆ ತಪ್ಪಿದಂತಾಗಿದೆ.

ಹೋಟೇಲಿನವರ ಮೇಲೆ ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಕುಂದಾಪುರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love