ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

Spread the love

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ಕುಂದಾಪುರ: ನವರಾತ್ರಿಯ ಪ್ರಯುಕ್ತ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಆಯುಧ ಪೂಜೆ ಆಚರಿಸಲಾಯಿತು.

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಿಗ್ಗೆ ಆಯುಧಪೂಜೆಯನ್ನು ಅರ್ಚಕರ ಸಮ್ಮುಖದಲ್ಲಿ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸರ್ವ ಸಿಬ್ಬಂಧಿಗಳು ಉಪಸ್ಥಿತರಿದ್ದು ಬಂದೂಕು ಮೊದಲಾದ ಆಯುಧ, ವಾಹನಗಳು, ಪೊಲೀಸ್ ಇಲಾಖೆಯ ವಾಹನಗಳಿಗೆ ಪೂಜೆ ಸಲ್ಲಿಸಿದರು.

ಕುಂದಾಪುರ ಡಿವೈಎಸ್ಪಿ ಹರೀರಾಮ್ ಶಂಕರ್, ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಮಂಜಪ್ಪ, ಕುಂದಾಪುರ ಠಾಣಾಧಿಕಾರಿ ಹರೀಶ್ ಕುಮಾರ್ ಇತರ ಪೊಲೀಸ್ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.


Spread the love