ಕುಂದಾಪುರ: ವಿವಿಧ ಬೇಡಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಹೋರಾಟ ಆರಂಭ

Spread the love

ಕುಂದಾಪುರ: ವಿವಿಧ ಬೇಡಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಹೋರಾಟ ಆರಂಭ

ಕುಂದಾಪುರ: ರಾಜ್ಯಾದ್ಯಂತ ವಿವಿಧ ಬೇಡಿಕೆಗೆ ಆಗ್ರಹಿಸಿ ಶುಕ್ರವಾರದಿಂದ ಆರಂಭವಾದ ಹೋರಾಟಕ್ಕೆ ಕುಂದಾಪುರದಲ್ಲಿಯೂ ಚಾಲನೆ ನೀಡಲಾಯಿತು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆಯ ವತಿಯಿಂದ ತಾಲ್ಲೂಕಿನ ವಿವಿಧ ಕಡೆ ತಮ್ಮ ದೈನಂದಿನ ಕೆಲಸ ಸ್ಥಗಿತಗೊಳಿಸಿ ಬೇಡಿಕೆ ಈಡೇರಿಸಲು ಪ್ರತಿಭಟನೆ ಆರಂಭಿಸಿದ್ದಾರೆ.

ಕುಂದಾಪುರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರನ್ನು ಭೇಟಿ ಮಾಡಿದ ಸಂಘಟನೆಯ ಕಾರ್ಯಕರ್ತೆಯರು ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯಾಧಿಕಾರಿಗಳ ಮೂಲಕವೂ ಮನವಿ ಸಲ್ಲಿಸಲಾಗಿದೆ.

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜೀವವನ್ನು ಪಣಕ್ಕಿಟ್ಟು ಹಗಲಿರುಳು ಕೆಲಸ ಮಾಡುತ್ತಿದ್ದೇವೆ. ಹೊರ ಭಾಗದಿಂದ ಬರುವವರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದೇವೆ. ಶಂಕಿತರ ಹಾಗೂ ಸೋಂಕಿತರ ಕ್ವಾರಂಟೈನ್ ನಿಯೋಜನೆ ಸೇರಿದಂತೆ ಕೊರೊನಾ ವಾರಿಯರ್ಸ್ ಆಗಿ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಕೂಡಲೇ ಮುಂದಾಗಬೇಕು ಎಂದು ಒತ್ತಾಯಿಸುತ್ತಿರುವ ಆಶಾ ‌ಕಾರ್ಯಕರ್ತೆಯರು, ಈ ಹಿಂದೆ ಹಲವು ಭಾರಿ ಮನವಿ ನೀಡಿ ಒತ್ತಾಯಿಸಿದ್ದರೂ ಬೇಡಿಕೆ ಈಡೇರದೆ ಇದ್ದುದರಿಂದ ಇಂದಿನಿಂದ ಅನಿರ್ದಿಷ್ಟಾವಧಿಯವರೆಗೆ ಕೆಲಸ ಸ್ಥಗಿತಗೊಳಿಸುವುದಾಗಿ ತಿಳಿಸಿದ್ದಾರೆ.

ಬೇಡಿಕೆಗಳು :
ಪ್ರಸ್ತುತ ನೀಡುತ್ತಿರುವ 12 ಸಾವಿರ ಗೌರವ ಧನವನ್ನು ಖಾತ್ರಿ ಮಾಡಬೇಕು.

ಕೊರೊನಾ ಕಾರ್ಯಕ್ಕಾಗಿ ಸ್ಯಾನಿಟೈಸರ್, ಮಾಸ್ಕ್ ಗಳನ್ನು ಸೇರಿದಂತೆ ಆರೋಗ್ಯ ಕಿಟ್ ನೀಡಬೇಕು.


Spread the love