ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ

Spread the love

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಮಂಗಳೂರು: ಮೂರು ದಿನಗಳ ಭೇಟಿಗಾಗಿ ಕರಾವಳಿಗೆ ಸೋಮವಾರ ರಾತ್ರಿ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಬೇಲಿಗೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಅಮಿತ್ ಶಾ ಅವರು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುಬ್ರಹ್ಮಣ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ದೇವಳದ ವತಿಯಿಂದ ಸ್ವಾಮೀಜಿಯವರು ಅಮಿತ್ ಶಾ ಅವರಿಗೆ ಶಾಲು ಹೊದಿಸಿ ಗೌರವಿಸಿದರು.

ಈ ವೇಳೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕ ಅಂಗಾರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಟಂದೂರು ಹಾಗೂ ಇತರರು ಉಪಸ್ಥಿತರಿದ್ದರು.


Spread the love