ಕುದ್ರೋಳಿ ಬಳಿ ಗಾಂಜಾ ಮಾರಾಟ ಯತ್ನ ; ಯುವಕನ ಬಂಧನ

Spread the love

ಕುದ್ರೋಳಿ ಬಳಿ ಗಾಂಜಾ ಮಾರಾಟ ಯತ್ನ ; ಯುವಕನ ಬಂಧನ

ಮಂಗಳೂರು: ನಗರದಲ್ಲಿ ಮಾದಕ ದ್ರವ್ಯ ಸಾಗಾಟ, ಮಾರಾಟ ಮಾಡುವವರ ಪತ್ತೆಯ ಬಗ್ಗೆ ಇಕೋನಾಮಿಕ್ & ನಾರ್ಕೋಟಿಕ್ ಕ್ರೈಂ ಪೋಲಿಸ್ ಠಾಣಾ ಪೋಲಿಸ್ ನಿರೀಕ್ಷಕರು ಮತ್ತು ಸಿಬಂದಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ್ನು ಗುರುವಾರ ಬಂಧಿಸಿದ್ದಾರೆ.

ಬಂಧಿತನನ್ನು ಕುದ್ರೋಳಿ ನಿವಾಸಿ ಮಹಮ್ಮದ್ ನೌಪಾಲ್ (30) ಎಂದು ಗುರುತಿಸಲಾಗಿದೆ.

ಗುರುವಾರ ಇಕೊನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೋಲಿಸ್ ಠಾಣಾ ಪೋಲಿಸ್ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆನಗರದ ಕುದ್ರೋಳಿ ಟಿಪ್ಪು ಸುಲ್ತಾನ್ ನಗರದ ಬಳಿ ತಿರುವು ರಸ್ತೆಗೆ ತಲುಪಿದಾಗ ಪ್ಲಾಸ್ಟಿಕ್ ಚೀಲವನ್ನು ಹಿಡಿದುಕೊಂಡು ನಿಂತಿದ್ದ ಆರೋಪಿ ಮಹಮ್ಮದ್ ಪೋಲಿಸ್ ಜೀಪನ್ನು ಕಂಡು ಒಡಲು ಯತ್ನಿಸಿದ್ದು, ಆತನನ್ನು ಹಿಡಿದು ವಿಚಾರಿಸಿ ತಪಾಸಣೆ ಮಾಡಿದಾಗ ಆತನ ಕೈಯಲ್ಲಿರುವ ಪ್ಲಾಸ್ಟಿಕ್ ಚೀಲದಲ್ಲಿ ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಲಕೋಟೆಯಲ್ಲಿ ಗಾಂಜಾ ಇದ್ದು, ಗಾಂಜಾವನ್ನು ಮಾರಾಟ ಮಾಡಲು ತಂದಿರುವುದಾಗಿ ಒಪ್ಪಿಕೊಂಡಿದ್ದು, ಆತನ ಕೈಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿದ್ದ ರೂ 5600 ಬೆಲೆಯ 245 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ನಗರ ಪೊಲೀಸ್ ಆಯುಕ್ತರಾದ ಟಿ ಸುರೇಶ್ ಅವರ ಆದೇಶದಂತೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹನುಮಂತರಾಯ, ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಅವರ ನಿರ್ದೇಶನ ಹಾಗೂ ವೆಲಂಟೈನ್ ಡಿಸೋಜಾ, ಎಸಿಪಿ ಸಿಸಿಆರ್ ಬಿ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಷರೀಪ್ ಸಿಬಂದಿಗಳಾದ ಜಗದೀಶ್, ಶಾಜು ನಾಯರ್, ಕಿಶೋರ್ ಪೂಜಾರಿ ಯವರು ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.


Spread the love