ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Spread the love

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಚಾಲನೆ ದೊರೆತಿದೆ.

ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನ ಹಾಗೂ ಉಪಸ್ಥಿತಿಯಲ್ಲಿ ಕ್ಷೇತ್ರದ ದರ್ಬಾರ್ ಮಂಟಪದಲ್ಲಿ ಶಾರದಾ ಮಾತೆ, ಮಹಾಗಣಪತಿ ಹಾಗೂ ನವದುರ್ಗೆಯರ ವಿಗ್ರಹಗಳ ಪ್ರತಿಷ್ಠಾಪನಾ ಮಹೋತ್ಸವ ನೆರವೇರಿತು. ವೇದಮೂರ್ತಿಗಳ ವೈದಿಕ ಸಮ್ಮುಖದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.

ಈ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ ಎಚ್.ವಿ., ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ಸೇರಿದಂತೆ ಪ್ರಮುಖ ಗಣ್ಯರು, ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಾವಿರಾರು ಭಕ್ತಾದಿಗಳು ಭಾಗವಹಿಸಿ ದೇವಿಯ ದರ್ಶನ ಪಡೆದರು.

ಕ್ಷೇತ್ರದಲ್ಲಿ ಇಂದಿನಿಂದ 10 ದಿನಗಳ ಕಾಲ ನವರಾತ್ರಿ ಆಚರಣೆ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಧಾರ್ಮಿಕ ಪೂಜೆಗಳು ಮತ್ತು ಚಂಡಿಕಾ ಹೋಮಗಳು ನೆರವೇರಲಿವೆ. ಇಡೀ ಕ್ಷೇತ್ರವನ್ನು ರಂಗುರಂಗಿನ ವಿದ್ಯುತ್ ದೀಪಾಲಂಕಾರಗಳಿಂದ ಶೃಂಗರಿಸಲಾಗಿದ್ದು, ಮಂಗಳೂರು ದಸರಾದ ಕಳೆ ಕಟುವಾಗಿ ಶೋಭಿಸುತ್ತಿದೆ.


Spread the love
Subscribe
Notify of

0 Comments