ಕುಮಾರಸ್ವಾಮಿ ಜನ್ಮದಿನ: ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಕುದ್ರೊಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಮಂಗಳೂರು: ಕರುನಾಡ ಕಣ್ಮಣಿ, ಬಡವರ ಆಶಾಕಿರಣ, ರೈತರ ಶಕ್ತಿ, ನಮ್ಮ ನಾಡಿನ ನೆಚ್ಚಿನ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಜನತಾದಳ (ಜಾ) ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ವತಿಯಿಂದ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಕುದ್ರೊಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾರ್ಚನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಕ್ಷಿತ್ ಸುವರ್ಣ, “ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅನೇಕ ಜನಪರ ಹಾಗೂ ಪ್ರಗತಿಪರ ಯೋಜನೆಗಳನ್ನು ನೀಡಿದ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲೂ ಬಡವರ ಹಿತಕ್ಕಾಗಿ ಇನ್ನಷ್ಟು ಯೋಜನೆಗಳನ್ನು ರೂಪಿಸಲು ದೇವರು ಅವರಿಗೆ ಉತ್ತಮ ಆರೋಗ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ವಿಶೇಷವಾಗಿ ಪ್ರಾರ್ಥಿಸಲಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಜನತಾದಳ (ಜಾ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ ಸೇರಿದಂತೆ ಯುವ ಪದಾಧಿಕಾರಿಗಳಾದ ನಿತೇಶ್ ಪೂಜಾರಿ, ಭರತ್, ಆದರ್ಶ ಪೂಜಾರಿ, ರಿನಿತ್ ಪೂಜಾರಿ, ನಿಶಾಂತ್, ಸುಶಾಂತ್, ಪ್ರಣಾಮ್, ವಿನಿತ್ ಮತ್ತಿತರರು ಉಪಸ್ಥಿತರಿದ್ದರು.












