ಕೃಷಿ ಸಚಿವ ಕೃಷ್ಣ ಭೈರೇಗೌಡ ಆವರಿಂದ ರೈತ ಸಂಪರ್ಕ ಕೇಂದ್ರ ಉದ್ಘಾಟನೆ

Spread the love

ಕೃಷಿ ಸಚಿವ ಕೃಷ್ಣ ಭೈರೇಗೌಡ ಆವರಿಂದ ರೈತ ಸಂಪರ್ಕ ಕೇಂದ್ರ ಉದ್ಘಾಟನೆ

ಉಡುಪಿ : ಸಹಾಯಕ ಕೃಷಿ ನಿರ್ದೇಶಕರ ಉಡುಪಿ ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರೈತ ಸಂಪರ್ಕ ಕೇಂದ್ರವನ್ನು ರಾಜ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಶುಕ್ರವಾರ ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ, ಕೃಷಿ ಸಚಿವರು, 4 ಟ್ರಾಕ್ಟರ್, 1 ಟಿಲ್ಲರ್, 3 ಪವರ್ ವೀಡರ್ ಗಳನ್ನು ರೈತರಿಗೆ ವಿತರಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ಜಿ.ಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ. ಚಂದ್ರಶೇಖರ್ ನಾಯ್ಕ್, ಸಹಾಯಕ ನಿರ್ದೇಶಕ ಮೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.


Spread the love