ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್: ಸ್ಪೀಕರ್ ಯು.ಟಿ. ಖಾದರ್

Spread the love

ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಸಿಗುತ್ತಿತ್ತು. ಅದೇ ಮಾದರಿಯಲ್ಲಿ ಕೆಂಪು ಕಲ್ಲು ಕೂಡ ಜನಸಾಮಾನ್ಯರಿಗೆ ಸಿಗಬೇಕು. ಕೆಂಪುಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಸರಕಾರಿ ದರದಲ್ಲಿ ಕೆಂಪು ಕಲ್ಲನ್ನು ಅಗತ್ಯ ಇರುವವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯು ನೂತನ ಆ್ಯಪ್ ಮೂಲಕ ಆಗಲಿದೆ ಎಂದರು.

ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರೊಂದಿಗೆ ಬೆಂಗಳೂರಲ್ಲಿ 2ನೇ ಹಂತದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಅಧಿಕಾರಿಗಳು ವಹಿಸಬೇಕಾದ ಕ್ರಮಗಳ ಕುರಿತು ಸೂಚಿಸಲಾಗಿದೆ. ಹಾಗಾಗಿ ಈ ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.


Spread the love
Subscribe
Notify of

0 Comments
Inline Feedbacks
View all comments