ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ! ಲಾಡ್ಜ್ ಮೇಲೆ ಪೊಲೀಸರ ದಾಳಿ, ಯುವತಿಯ ರಕ್ಷಣೆ

Spread the love

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ! ಲಾಡ್ಜ್ ಮೇಲೆ ಪೊಲೀಸರ ದಾಳಿ, ಯುವತಿಯ ರಕ್ಷಣೆ

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿರುವ ದೂರಿನೆ ಆಧಾರದ ಮೇಲೆ ಉಡುಪಿ ನಗರದಲ್ಲಿರುವ ಲಾಡ್ಜ್ ಒಂದಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಣೆ ಮಾಡಿರುವ ಘಟನೆ ರವಿವಾರ (ಆ.24) ನಡೆದಿದೆ.

ಉಡುಪಿಯ ಮೂಡನಿಡಂಬೂರು ಗ್ರಾಮದಲ್ಲಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಕುರಿತು ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ್ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರ ತಂಡ ಲಾಡ್ಜ್ ನ ಎರಡನೇ ಮಹಡಿಯಲ್ಲಿರುವ ಕೊಠಡಿಯಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದು ಈ ವೇಳೆ ವಿಚಾರಣೆ ನಡೆಸಿದ ವೇಳೆ ಮಹಿಳೆ ತನಗೆ ಕೆಲಸ ಕೊಡಿಸುವ ನೆಪದಲ್ಲಿ ಶರತ್ ಅಲಿಯಾಸ್ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ಆ.19 ರಂದು ಉಡುಪಿಗೆ ಕರೆದುಕೊಂಡು ಬಂದು ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಮಹಿಳೆ ಮಾಹಿತಿ ನೀಡಿದ್ದಾರೆ.

ಸದ್ಯ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು, ಆರೋಪಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments