ಕೆ.ಎಂ.ಸಿ ಆಸ್ಪತ್ರೆಯಲ್ಲಿ ಸಂಸ್ಥಾಪಕರ ದಿನಾಚರಣೆ

Spread the love

ಕೆ.ಎಂ.ಸಿ ಆಸ್ಪತ್ರೆಯಲ್ಲಿ ಸಂಸ್ಥಾಪಕರ ದಿನಾಚರಣೆ

ಮಂಗಳೂರು : ಕೆ.ಎಂ.ಸಿ ಆಸ್ಪತ್ರೆ ಅತ್ತಾವರದಲ್ಲಿ ಏಪ್ರಿಲ್ 30 ರಂದು ಪದ್ಮಶ್ರೀ ಡಾ. ಟಿ.ಎಂ.ಎ. ಪೈ ಯವರ ಜನ್ಮದಿನವನ್ನು ಸಂಸ್ಥಾಪಕರ ದಿನಾಚರಣೆಯಾಗಿ ಸರಳವಾಗಿ ಆಚರಿಸಲಾಯಿತು. ಕೆ.ಎಂ.ಸಿ ಆಸ್ಪತ್ರೆ ಅತ್ತಾವರದ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್‍ರವರು ದೀಪ ಬೆಳಗಿಸಿ ಡಾ. ಟಿ.ಎಂ.ಎ. ಪೈ ಯವರ ಭಾವಚಿತ್ರಕ್ಕೆ ಹೂಗಳನ್ನು ಅರ್ಪಿಸುವ ಮೂಲಕ ನಮನವನ್ನು ಸಲ್ಲಿಸಿದರು.

ಪದ್ಮಭೂಷಣ ಡಾ| ಟಿ.ಎಂ.ಎ. ಪೈ ಯವರು ಸಮಾಜವನ್ನು ಕಾಡುವ ಮೂರು ಪ್ರಮುಖ ಸಮಸ್ಯೆಗಳಾದ ಅನಾರೋಗ್ಯ, ಅನಕ್ಷರತೆ ಹಾಗೂ ಬಡತನ ನಿರ್ಮೂಲನೆ ಮಾಡಲು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಎಂಬ ಬೃಹತ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದು ಈ ಮೂಲಕ ತಮ್ಮ ಕನಸನ್ನು ನನಸಾಗಿಸಲು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದರು.

ಕೋವಿಡ್–19 ಲಾಕ್‍ಡೌನ್ ನಿಂದಾಗಿ ಹಾಗೂ ಸರಕಾರದ ಮಾರ್ಗಸೂಚಿಗಳ ಪ್ರಕಾರ ಯಾವುದೇ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರಲಿಲ್ಲ ಬದಲಿಗೆ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಆಸ್ಪತ್ರೆಯಲ್ಲಿರುವ ಎಲ್ಲಾ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು. ಸರಳವಾಗಿ ಆಚರಿಸಿದ ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯಲ್ಲಿ ಸಾಮಾಜಿಕ ಅಂತರ ಮತ್ತು ಎಲ್ಲಾ ರೀತಿಯ ಸುರಕ್ಷತಾ ವಿಧಾನಗಳನ್ನು ಅನುಸರಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ದೀಪಕ್ ಮಡಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.


Spread the love