ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆ ಮೇಲೆ ಎಸಿಬಿ ದಾಳಿ

Spread the love

ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ಮನೆ ಮೇಲೆ ಎಸಿಬಿ ದಾಳಿ

ಮಂಗಳೂರು : ಕರ್ನಾಟಕ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆಗಳ ಮತ್ತು ಆಸ್ತಿಯ ಮೇಲೆ ಇಂದು ಮುಂಜಾನೆ ಎಸಿಬಿ ದಾಳಿ ನಡೆಸಿದ್ದು ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ.

ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ನಿವಾಸದ ಮೇಲೆ ದಾಳಿ ನಡೆದಿದ್ದು ಶೋಧ ಕಾರ್ಯ ನಡೆಯುತ್ತಿದೆ. ಮಂಗಳೂರು ಮತ್ತು ಮಂಡ್ಯದಲ್ಲಿ ಎಸಿಬಿ ಏಕಕಾಲಕ್ಕೆ ದಾಳಿ ನಡೆದಿದ್ದು ಮಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಎಸಿಬಿ ಎಸ್ ಪಿ ಉಮಾ ಪ್ರಶಾಂತ್, ಡಿವೈಎಸ್ ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೇಶ್ ನಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.


Spread the love