ಕೊರೋನಾ ನಡುವೆ ಉಡುಪಿ ಜಿಲ್ಲೆಯಲ್ಲಿ ಸರಳ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಉಡುಪಿ: ಕೋರೋನಾ ಭೀತಿಯ ನಡುವೆ ಉಡುಪಿ ಜಿಲ್ಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವವನ್ನು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಗೈರಾದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಧ್ವಜಾರೋಹಣ ನಡೆಸಿ ಗೌರವ ವಂದನೆ ಸಲ್ಲಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು .
ಕೊರೋನಾ ಹಿನ್ನಲೆಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರಾಕರಿಸಲಾಗಿದ್ದು ನೇರಪ್ರಸಾರದ ಮೂಲಕ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.
ಕಾರ್ಯಕ್ರಮದಲ್ಲಿ ಕೋರೊನಾ ಸಂದರ್ಭದ್ಲಲ್ಲಿ ಸೇವೆ ಸಲ್ಲಿಸಿದ್ದ ಕೊರೋನಾ ವಾರಿಯರ್ಸ್ ಗಳ ಆರೋಗ್ಯಾಧಿಕಾರಿಗಳು, ವೈದ್ಯರು, ಆಶಾ ಕಾರ್ಯಕರ್ತೆ ಯರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್, ಸಿಇಒ ಪ್ರೀತಿ ಗೆಹ್ಲೋಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಹಾಗೂ ಇತರರು ಉಪಸ್ಥಿತರಿದ್ದರು.












