ಕೊರೋನಾ ವಾರಿಯರ್ಸ್ ಗಳಿಗೆ ಮಂಗಳೂರು ಪೊಲೀಸರ ಸೆಲ್ಯೂಟ್!

Spread the love

ಕೊರೋನಾ ವಾರಿಯರ್ಸ್ ಗಳಿಗೆ ಮಂಗಳೂರು ಪೊಲೀಸರ ಸೆಲ್ಯೂಟ್!

ಮಂಗಳೂರು : ಕೊರೋನಾ ವಾರಿಯರ್ಸ್ ಗಳಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟುಕೊಂಡು ಕೋವಿಡ್ -19 ಸಮರದಲ್ಲಿ ತೊಡಗಿಸಿಕೊಂಡಿರುವ ನೂರಾರು ಮಂದಿಗೆ ಮಂಗಳೂರು ನಗರ ಪೊಲೀಸರಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ವತಿಯಿಂದ ಡಾ.ಪಿ.ಎಸ್.ಹರ್ಷ ನೇತೃತ್ವದಲ್ಲಿ ವೈದ್ಯರು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಸುರಕ್ಷಿತ ಅಂತರ ಕಾಯ್ದುಕೊಂಡು ಆಸ್ಪತ್ರೆಯೆದುರು ನಿಂತಿದ್ದ ಕೋವಿಡ್- 19 ವಾರಿಯರ್ಸ್ಗೆ 25 ಪೊಲೀಸ್ ಬೆಂಗಾವಲು ವಾಹನಗಳ ಮೂಲಕ ಗೌರವ ಸಲ್ಲಿಸಲಾಯಿತು.

ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಪಂ ಸಿಇಒ ಸೆಲ್ವಮಣಿ, ಡಿಎಚ್ಒ ಡಾ.ರಾಮಚಂದ್ರ ಬಾಯರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಮಾಲಾಡಿ  ಮತ್ತಿತರರು ಉಪಸ್ಥಿತರಿದ್ದರು.


Spread the love