ಕೋಟತಟ್ಟು ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Spread the love

ಕೋಟತಟ್ಟು ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಕೋಟ: ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪಾರಂಪಳ್ಳಿ ಪಡುಕೆರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ ಕೌಶಿಕ್(21), ಕೋಟತಟ್ಟುವಿನ ಪಡುಕೆರೆಯ ಅಂಕಿತ್(19) ಮತ್ತು ಸುಜನ್(21) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಡಿ.14ರಂದು ಸಂಜೆ ವೇಳೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್ನಲ್ಲಿ ಪಾರ್ಟಿ ಮುಗಿಸಿ ಪಡುಕೆರೆಯ ಸರ್ಕಲ್ ಗೆ ಬಂದು ಅಲ್ಲಿ ಊಟ ಮಾಡಿಕೊಂಡು ಮಾತನಾಡುತ್ತಿದ್ದರು. ದರ್ಶನ್ ಮತ್ತು ಕೌಶಿಕ್, ಅಂಕಿತ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ಮತ್ತು ಮದ್ಯಪಾನದ ವಿಚಾರದಲ್ಲಿ ವಾಗ್ವಾದ ಆಗಿ ಅವಾಚ್ಯ ಶಬ್ದಗಳಿಂದ ಬೈದು, ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದರೆನ್ನಲಾಗಿದೆ.

ಹೊಡೆದಾಟದ ವೇಳೆ ದರ್ಶನ್, ಸಂತೋಪ್ ಕುತ್ತಿಗೆ ಹಿಂಬದಿಗೆ ದರ್ಶನ್ ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಕೌಶಿಕ್ ಕೂಡಾ ಕೈಯಿಂದ ಹೊಡೆದ್ದದ್ದಾನೆ. ರಜತ್ ಇವರ ಜಗಳವನ್ನು ನಿಲ್ಲಿಸಿದ್ದಾರೆ. ಆದರೆ ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್ ಅಲ್ಲಿಯೇ ಕುಸಿದು ಬಿದ್ದರೆಂದು ತಿಳಿದುಬಂದಿದೆ.

ಬಳಿಕ ಸಂತೋಷನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಸಂತೋಷ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments