ಕೋಟ ಪೊಲೀಸ್ ಠಾಣೆಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಭೇಟಿ

Spread the love

ಕೋಟ ಪೊಲೀಸ್ ಠಾಣೆಗೆ ಗೃಹಸಚಿವ ಡಾ. ಜಿ ಪರಮೇಶ್ವರ್ ಭೇಟಿ

ಕೋಟ: ಅನ್ಯ ರಾಜ್ಯಗಳಲ್ಲಿನ ವಿವರ ಪಡೆದು ಪೊಲೀಸ್ ಕಾನ್ಸೆಬಲ್ ಆಸಕ್ತ ಅಭ್ಯರ್ಥಿಗಳ ವಯೋಮಿತಿ 33 ವರ್ಷಕ್ಕೆ ಏರಿಕೆ ಬಗ್ಗೆ ಕ್ರಮ ಕೈ ಗೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ. ಪರಮೇಶ್ವರ್ ಹೇಳಿದರು.

ಅವರು ಶನಿವಾರ ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಬಂದಿ ಕೊರತೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಪ್ರತಿಯೊಂದು ಠಾಣೆಗಳಲ್ಲಿ ಸಿಬಂದಿಗಳ ಕೊರತೆ ಇದ್ದರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಲಾಗುವುದು. ಕೋಟ ಠಾಣೆಯಲ್ಲಿ ವಾಹನದ ಕೊರತೆ, ಟೋಲ್ ಸಮಸ್ಯೆ, ಕರಾವಳಿ ತೀರ ಭದ್ರತೆ, ದಲಿತ ಸಮಸ್ಯೆಗಳ ನಿರ್ಮೂಲನೆ, ಕಂದಾಯ ಇಲಾಖೆಯ ವ್ಯಾಜ್ಯಗಳು ಸೇರಿದಂತೆ ಅನೇಕ ಸಮಸ್ಯೆಗಳಿಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಕೊರತೆ ಬಗ್ಗೆ ಪ್ರತಿಕ್ರಿಯಿಸಿ, ಆದಷ್ಟು ಬೇಗ ನೇಮಕಾತಿ ಪಕ್ರಿಯೆ ನಡೆಯಲಿದೆ ಎಂದರು.

ಠಾಣೆಗೆ ಬಂದು ದೂರು ನೀಡಿದವರ ಕೆಲವರ ಯೋಗ ಕ್ಷೇಮ ವಿಚಾರಿಸಿ, ಠಾಣೆಯ ಕುರಿತು ಅಭಿಪ್ರಾಯ ಪಡೆದುಕೊಂಡು, ಕೆಲವು ಸಲಹೆ, ಸೂಚನೆ ನೀಡಿದರು. ಅಪಘಾತ, ಕ್ರೂರ ಪ್ರಕರಣಗಳು, ಅಧಿಕೃತ ರಕ್ಷಣಾ ಆಯುಧಗಳ ಪರವಾನಿಗೆ, ಹೊಂದಿರುವವರ ಕುರಿತು ಮಾಹಿತಿ ಪಡೆದರು.
ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಸಿವಿಲ್ ವ್ಯಾಜ್ಯಗಳ ಕುರಿತು ಠಾಣಾ ಉಪನಿರೀಕ್ಷಕ ರಾಘವೇಂದ್ರ ಸಿ. ಗಮನ ಸೆಳೆದರು. ದಲಿತ ಕುಂದುಕೊರತೆ ಸಭೆಗಳನ್ನು ಪ್ರತಿ ತಿಂಗಳು ನಡೆಸುತ್ತಿದ್ದೇವೆ ಎಂದು ಸಚಿವರಿಗೆ ಮಾಹಿತಿ ನೀಡಿದರು

ಅಪಘಾತವನ್ನು ಘೋರ ಪಾತಕ ಕೃತ್ಯಗಳಲ್ಲಿ ಪರಿಗಣಿಸುತ್ತೀರಾ ಎಂದು ಸಚಿವರು ಕೇಳಿದ ಪ್ರಶ್ನೆಗೆ, ಉಡುಪಿ ಜಿಲ್ಲಾ ಎಸ್ ಪಿ ಹರಿರಾಂ ಶಂಕರ್ ಉತ್ತರ ನೀಡಿ, ಘೋರ, ಭೀಕರ, ಬೇಕಾಬಿಟ್ಟಿ ಚಾಲನೆಯಿಂದ ಆದ ಜೀವ ಹಾನಿ ಪ್ರಕರಣಗಳು ಅಂತಹ ದಾರುಣ ಪ್ರಕರಣಗಳಲ್ಲಿ ಬರುತ್ತವೆ ಎಂದರು.

ಎಲ್ಲಾ ಜಾತಿ, ಸಮುದಾಯದ ಸಣ್ಣ, ದೊಡ್ಡ ಪ್ರಾರ್ಥನಾ ಮಂದಿರ ಗಳಿಗೆ ರಾತ್ರಿ ಬೆಳಕಿನ ಸೌಲಭ್ಯ ಹಾಗೂ ಸಿಸಿಟಿವಿ ಅಳವಡಿಸಿ, ಅದರ ಮಾಹಿತಿ ಪ್ರತಿದಿನ ಠಾಣಾ ವ್ಯಾಪ್ತಿಯಲ್ಲಿ ಬರುವಂತೆಯೂ ಗೃಹಸಚಿವರು ಸಲಹೆ ನೀಡಿದರು.

ಸಾಮಾಜಿಕ ಕಾರ್ಯಕರ್ತ ಡಾ. ಎಮ್ ವಿ ಹೊಳ್ಳ ಸಚಿವರಿಗೆ, ಪೋಲೀಸ್ ವಾಹನ ಕೊರತೆ ಕುರಿತು ಗಮನ ಸೆಳೆದರು. ಹೆದ್ದಾರಿಯಲ್ಲಿ ಅಲ್ಲಲ್ಲಿ ಬ್ಯಾರಿಕೇಡ್ ಆವಾಂತರ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಸಮಾಲೋಚಿಸಿ ಸುಗಮ ಸಂಚಾರ ವ್ಯವಸ್ಥೆ ಗೆ ಅನುವು ಮಾಡಿಕೊಡುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಪೋಲೀಸ್ ಅಧಿಕಾರಿಗಳಾದ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಎಸ್ಪಿ ಹರಿರಾಂ ಶಂಕರ್, ಎಎಸ್ಪಿ ಪರಮೇಶ್ವರ್, ಉಡುಪಿ ಡಿವೈಎಸ್ಪಿ ಡಿ ಟಿ ಪ್ರಭು, ಕುಂದಾಪುರ ಡಿವೈಎಸ್ಪಿ ಎಚ್ ಡಿ ಕುಲಕರ್ಣಿ, ಬ್ರಹ್ಮಾವರ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಕೋಟ ಉಪನಿರೀಕ್ಷಕ ರಾಘವೇಂದ್ರ ಸಿ. ಕೋಟ ಎಸ್ಐ ಸುಧಾ ಪ್ರಭು ಮತ್ತು ಸಿಬ್ಬಂದಿಗಳು, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಎಮ್ ಎ ಗಫೂರ್, ರಾಜು ಪೂಜಾರಿ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮಲ್ಯಾಡಿ ಶಿವರಾಮ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು


Spread the love
Subscribe
Notify of

0 Comments
Inline Feedbacks
View all comments